ಕರ್ನಾಟಕ

karnataka

ETV Bharat / state

ರಾಜಧಾನಿಯಲ್ಲಿ ಭಾರೀ ಮಳೆ : ನೀರು ನುಗ್ಗಿ ವಾಹನ ಸಂಚಾರ ಅಸ್ತವ್ಯಸ್ಥ

ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆಆರ್​​ ಪುರ ಸೇರಿ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡು ಬಂದಿದೆ..

Heavy rain in bangalore
ರಾಜಧಾನಿಯಲ್ಲಿ ಭಾರೀ ಮಳೆ

By

Published : Sep 20, 2021, 3:38 PM IST

ಬೆಂಗಳೂರು :ನಗರದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಕೆಲವೆಡೆ ಮರಗಳು ಧರೆಗುರುಳಿವೆ.

ಸಿಲಿಕಾನ್ ಸಿಟಿಯಲ್ಲಿ ಮಳೆ

ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದಿಂದ ಮಳೆಯಾಗುತ್ತಿದ್ದು, ನಗರದ ಅನೇಕ ಕಡೆ ನೀರು ನುಗ್ಗಿದೆ. ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.

ಹಲವೆಡೆ ಮಳೆ :ಆರ್​ಆರ್ ​ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೇಸ್​ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ ಸೇರಿ ಬಹುತೇಕ ಕಡೆ ಸಾಧಾರಣ ಮಳೆಯಾಗಿರುವ ವರದಿಯಾಗಿದೆ.

ಪ್ರಮುಖ ರಸ್ತೆಗಳಲ್ಲಿ ನೀರು :ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆಆರ್​​ ಪುರ ಸೇರಿ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡು ಬಂದಿದೆ.

ಇದನ್ನೂ ಓದಿ:ನಾ ಹಣ ಕೊಟ್ಟಿಲ್ಲ ಅಂದ್ರೆ ಪೂರಕ ಅಂದಾಜು ಯಾಕಿರೋದು?; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

ABOUT THE AUTHOR

...view details