ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ರಾಜಧಾನಿಯ ಗಾಂಧಿನಗರ, ಮೆಜೆಸ್ಟಿಕ್, ಕುರುಬರಹಳ್ಳಿ, ಯಲಹಂಕ, ಏರ್ಪೋರ್ಟ್ ರಸ್ತೆ, ಸದಾಶಿವನಗರ, ಯಶವಂತಪುರ, ಮಲ್ಲೇಶ್ವರಂ, ಮಹಾಲಕ್ಷ್ಮಿಲೇಔಟ್ ಸೇರಿ ಹಲವೆಡೆ ಧಾರಾಕಾರ ಮಳೆ ಸುರಿದಿದೆ.
ಉದ್ಯಾನ ನಗರಿಯಲ್ಲಿ ವರುಣಾರ್ಭಟ: ಮುಂದಿನ ಐದು ದಿನಗಳಲ್ಲಿ ಮಳೆ ಮುನ್ಸೂಚನೆ - ಬೆಂಗಳೂರಿನ ಇತ್ತೀಚಿನ ಸುದ್ದಿ
ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯಾಗಿದ್ದು, ಮುಂದಿನ ಐದು ದಿನಗಳ ಕಾಲ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಗ್ರಹ ಚಿತ್ರ
ರಾಜ್ಯದಲ್ಲಿ ಏ.26ರವರೆಗೆ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳ ಕಾಲ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಗರಿಷ್ಠ ತಾಪಮಾನ ದಾಖಲಾದ ಜಿಲ್ಲೆಗಳು :
- ಕಲಬುರಗಿ 41.1 ಡಿ.ಸೆ
- ರಾಯಚೂರು 39.4 ಡಿ.ಸೆ
- ವಿಜಯಪುರ 38.6 ಡಿ.ಸೆ
- ಬೀದರ 38.2 ಡಿ.ಸೆ
- ಕೊಪ್ಪಳ 38 ಡಿ.ಸೆ
Last Updated : Apr 21, 2021, 8:11 PM IST