ಕರ್ನಾಟಕ

karnataka

ETV Bharat / state

ರಾಜ್ಯದ ಹಲವೆಡೆ ಮಳೆಯ ಅಬ್ಬರ; ವಿವಿಧ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ - ಈಟಿವಿ ಭಾರತ್​ ಕನ್ನಡ ನ್ಯೂಸ್​

ರಾಜ್ಯದ ಹಲವೆಡೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

By

Published : Jul 27, 2023, 9:06 PM IST

ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳು ಇನ್ನಷ್ಟು ಬಿರುಸುಗೊಳ್ಳಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 28 ಮತ್ತು ಜುಲೈ 29 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಕ್ರಮವಾಗಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 28 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ,ವಿಜಯನಗರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ.

ಅಧಿಕ ಮಳೆ : ಮುಂಗಾರು ದುರ್ಬಲ ಪರಿಣಾಮ ಒಂದೂವರೆ ತಿಂಗಳ ಕಾಲ ಮಳೆ ಕೊರತೆ ಅನುಭವಿಸಿದ್ದ ರಾಜ್ಯದಲ್ಲಿ ವಾಡಿಕೆಗಿಂತ ತುಸು ಅಧಿಕವಾಗಿ ಸುರಿದಿದೆ. ರಾಜ್ಯದಲ್ಲಿ ಮುಂಗಾರು ಮಳೆ ಜೂನ್ ತಿಂಗಳಲ್ಲಿ ಸಕಾಲಕ್ಕೆ ಬಾರದೇ ಬರದ ಛಾಯೆ ಮೂಡಿಸಿದ್ದರೆ, ಜುಲೈ ತಿಂಗಳಲ್ಲಿ ಧಾರಾಕಾರವಾಗಿ ಸುರಿದು ಬರದ ಭೀತಿಯನ್ನು ಹೋಗಲಾಡಿಸಿದೆ. ಜೂನ್‌ನಲ್ಲಿ ವಾಡಿಕೆಯಷ್ಟು ಮುಂಗಾರು ಮಳೆ ಬರದೇ ವಿಫಲವಾಗಿದೆ. ಆದರೆ ಜುಲೈ ತಿಂಗಳಲ್ಲಿ ಹೆಚ್ಚು ಮಳೆಯಾಗಿದ್ದು, ಜೂನ್‌ನಲ್ಲಿ ಶೇ56ರಷ್ಟು ಮಳೆ ಕೊರತೆಯಾದರೆ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಶೇಕಡಾ 37ರಷ್ಟು ಹೆಚ್ಚು ಮಳೆ ಬಿದ್ದಿದೆ.

ಹೈ ವೇವ್ ಅಲರ್ಟ್ ಘೋಷಣೆ : ಕಳೆದ ತಿಂಗಳು ಜೂನ್​ 15 ರಿಂದ 19 ರವರೆಗೆ ಬಿಪರ್ ಜಾಯ್ ಚಂಡಮಾರುತ ಅಪ್ಪಳಿಸುವ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ ಮತ್ತು INCOIS ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ 'ಹೈ ವೇವ್ ಅಲರ್ಟ್' ಘೋಷಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ 42 ಕಿಲೋ ಮೀಟರ್​ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಹಿಂದೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ 'ಬಿಪರ್ ಜಾಯ್' ಚಂಡಮಾರುತವು ಅಪ್ಪಳಿಸುವ ಸಾಧ್ಯತೆ ಇದೆ.

ಹೀಗಾಗಿ ಕರಾವಳಿ ತೀರದಲ್ಲಿ 5 ದಿನಗಳ ಕಾಲ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿತ್ತು. ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿತ್ತು.

ಇದನ್ನೂ ಓದಿ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: 50ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್

ABOUT THE AUTHOR

...view details