ಕರ್ನಾಟಕ

karnataka

ETV Bharat / state

ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - Rain in many parts state for next three days

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Meteorological Department
ಹವಾಮಾನ ಇಲಾಖೆ

By

Published : May 7, 2023, 7:00 PM IST

ಬೆಂಗಳೂರು : ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 8ಕ್ಕೆ ಶಿವಮೊಗ್ಗ, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ. ಮೇ9ಕ್ಕೆ ಮೈಸೂರು ಹಾಗೂ ಚಾಮರಾಜನಗರ. ಮೇ10ಕ್ಕೆ ಮೈಸೂರು, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ :ಜನರ ಸುಗಮ ಜೀವನ, ಸುಲಲಿತ ಬದುಕಿಗಾಗಿ 'ಮಾರ್ವೆಲಸ್ ಮಲ್ಲೇಶ್ವರಂ' ಪ್ರಣಾಳಿಕೆ: ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್

ದಕ್ಷಿಣ ಒಳನಾಡಿನ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅಲ್ಲಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗು ಉತ್ತರ ಒಳನಾಡಿನ ಗದಗ, ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ :ಹ್ಯಾಟ್ರಿಕ್ ಜಯ ಸಾಧಿಸಿರುವ ಸತೀಶ್ ರೆಡ್ಡಿ ನಿದ್ದೆಗೆಡಿಸಿದ ಕಾಂಗ್ರೆಸ್ ಅಭ್ಯರ್ಥಿ: ಯಾರಾಗಲಿದ್ದಾರೆ ಬೊಮ್ಮನಹಳ್ಳಿ ಬಾಸ್?​

ಉಷ್ಣಾಂಶ ತಗ್ಗುವ ಸಾಧ್ಯತೆ :ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ತಗ್ಗುವ ಸಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ : ರಾಜ್ಯ ರಾಜಧಾನಿ ಬೆಂಗಳೂರು ನಗರನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚುನಾವಣೆಗೆ ಕಾರ್ಯಕ್ಕೆ ವರುಣನ ಅಡ್ಡಿ..ರಾಜ್ಯದಲ್ಲಿ ಇದೇ ಮೇ 10 ರಂದು ಮತದಾನ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ವಿಕಲಚೇತನರು ಮತ್ತು 80 ವರ್ಷ ಮೇಲ್ಪಟ್ಟ ಹಿರಿಯರು ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸಾರ್ವತ್ರಿಕ ಮತದಾನಕ್ಕೆ ತಯಾರಿ ನಡೆದಿರುವ ಈ ಸಂದರ್ಭದಲ್ಲಿ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಈ ಬಾರಿ ವರುಣದೇವನಿಂದ ಪ್ರಕ್ರಿಯೆಗೆ ಅಡ್ಡಿಯಾಗುವ ಆತಂಕ ಎದುರಾಗಿದೆ.

ಇದನ್ನೂ ಓದಿ :ಕೃಷ್ಣಪ್ಪ ವರ್ಚಸ್ಸಿಗೆ ಮಣೆ ಹಾಕ್ತಾರಾ ಮತದಾರ ಪ್ರಭುಗಳು, ಮೋದಿ ಮೋಡಿಗೆ ಗೆಲ್ಲುತ್ತಾರಾ ರವೀಂದ್ರ?: ಕುತೂಹಲ ಮೂಡಿಸಿದ ವಿಜಯನಗರ ಕ್ಷೇತ್ರ..!

ABOUT THE AUTHOR

...view details