ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ. ಏಪ್ರಿಲ್ 30ರಿಂದ ಮೇ 4ರವರೆಗೆ ಕರಾವಳಿ ಜಿಲ್ಲೆಗಳಿಗೆ ಹಲವೆಡೆ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿಯೂ ನಾಲ್ಕು ದಿನ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ 30 ರಿಂದ ಮೇ.2 ರವರೆಗೆ ಕೆಲವು ಕಡೆ ಹಾಗೂ ಮೇ 2 ರಿಂದ 4 ರವರೆಗೆ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನಾ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದರು.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ: ಬೆಂಗಳೂರಿಗೂ ಗುಡುಗು - ಮಿಂಚು ಸಹಿತ ವರುಣಾಗಮನ - ರಾಜ್ಯದ ಹಲವೆಡೆ ಮಳೆ
ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನಾ ವಿಭಾಗದ ನಿರ್ದೇಶಕರಾದ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
heavy-rain-in-state-for-4-days
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದರು.
ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ರಾಜ್ಯದ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ದ.ಕನ್ನಡ ಜಿಲ್ಲೆಯಲ್ಲಿ 5 ಸೆಂ.ಮೀ, ಬೆಳಗಾವಿಯಲ್ಲಿ 3 ಸೆಂ.ಮೀ, ಕುಂದಾಪುರದಲ್ಲಿ 2 ಸೆ.ಮೀ. ಮಳೆಯಾಗಿದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated : Apr 30, 2021, 7:47 PM IST