ಬೆಂಗಳೂರು: ಕರ್ನಾಟಕ, ಮಹಾರಾಷ್ಟ್ರ, ಹಾಗೂ ಕೇರಳದ ಕರಾವಳಿ ಭಾಗಗಳಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವ ಹಿನ್ನೆಲೆ, ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದರು.
ಮುಂದಿನ ನಾಲ್ಕು ದಿನ ಕರಾವಳಿ-ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ - bangalore rain news
ಇಂದು ಹಾಗೂ ನಾಳೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದೆ.
ಸೆ.14 ಕ್ಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಲಿದ್ದು, ಬೀದರ್ ಹಾಗೂ ಕಲಬುರ್ಗಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ದಾರವಾಡ, ಕಲಬುರಗಿಯಲ್ಲಿ ಸೆ. 15 ರವರೆಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಸೆ.12 ಹಾಗೂ 13 ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದೆ.
ಸೆ.14 ರಿಂದ ಸೆ.16 ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಹಾಗೂ ಬೆಂ.ಗ್ರಾಮಾಂತರಕ್ಕೆ ನಾಳೆ ಎಲ್ಲೋ ಅಲರ್ಟ್ ಇದ್ದು, ಮಲೆನಾಡು ಜಿ್ಳೆಲ್ಲೆಗಳಿಗೆ ಸೆ.12 ಹಾಗೂ 13 ರಂದು ಎಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.