ಕರ್ನಾಟಕ

karnataka

ETV Bharat / state

ಮುಂದಿನ 5 ದಿನ ಕರಾವಳಿಯಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - ಬೆಂಗಳೂರು

ಬೆಂಗಳೂರಿನಲ್ಲಿ ಜುಲೈ 15 ಹಾಗೂ 16 ರಂದು ಹಗುರ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

rain
ಮಳೆ

By

Published : Jul 15, 2020, 5:50 PM IST

ಬೆಂಗಳೂರು:ಕಳೆದ ಮೂರು ದಿನಗಳಿಂದ ಬಿಡುವು ಕೊಟ್ಟಿದ್ದ ವರುಣ ಇಂದು ಮತ್ತೆ ಸಿಲಿಕಾನ್ ಸಿಟಿ ಪ್ರವೇಶಿಸಿದ್ದಾನೆ.

ಪೂರ್ವ ಅರಬ್ಬಿ ಸಮುದ್ರ ಹಾಗೂ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮುಂದಿನ ಐದು ದಿನಗಳ ಕಾಲ ಅಂದರೆ ಜುಲೈ 17ರಿಂದ 19 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ ಎಂದು ಹವಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಅಲ್ಲದೆ, ಜುಲೈ 16 ರಂದು ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 17,18,19ರಂದು ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಲಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 15 ರಿಂದ 19 ರವರೆಗೆ ವ್ಯಾಪಕ ಮಳೆಯಾಗಲಿದೆ. ಜುಲೈ 18 ಹಾಗೂ19 ರಂದು ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಜುಲೈ 15 ಹಾಗೂ 16 ರಂದು ಹಗುರ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು ಸಾಯಂಕಾಲದ ಹೊತ್ತಿಗೆ ಜಯನಗರ, ಮೆಜೆಸ್ಟಿಕ್, ಮತ್ತಿಕೆರೆ, ಬನಶಂಕರಿ, ವಿಜಯನಗರ ಸುತ್ತಮುತ್ತ ಮಳೆಯಾಗಿದ್ದು, ನಾಳೆಯೂ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ABOUT THE AUTHOR

...view details