ಕರ್ನಾಟಕ

karnataka

ETV Bharat / state

ರಾಜ್ಯದ 21 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: ಆರೆಂಜ್, ಯಲ್ಲೋ ಅಲರ್ಟ್ ಘೋಷಣೆ - heavy rain in karnataka districts

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಮತ್ತು ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

rain
ಮಳೆ

By

Published : Oct 16, 2022, 6:47 AM IST

Updated : Oct 16, 2022, 8:45 AM IST

ಬೆಂಗಳೂರು: ರಾಜ್ಯಾದ್ಯಂತ ಶನಿವಾರ ಸಹ ಗುಡುಗು ಸಹಿತ ಭಾರಿ ಮಳೆಯಾಗಿದ್ದು, 21 ಜಿಲ್ಲೆಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಕೊಪ್ಪಳ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:ಮಂಡ್ಯದಲ್ಲಿ ಭಾರಿ ಮಳೆ : ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ಬಂದ್​, ಅಪಾರ ಬೆಳೆಹಾನಿ

ದಕ್ಷಿಣ ಒಳನಾಡಿನ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಕೊಡಗು, ರಾಮನಗರ, ತುಮಕೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Last Updated : Oct 16, 2022, 8:45 AM IST

ABOUT THE AUTHOR

...view details