ಕರ್ನಾಟಕ

karnataka

ETV Bharat / state

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ - ಕರ್ನಾಟಕ ಮಳೆ ಮಾಹಿತಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆ ಆಗಲಿದೆ. ಉಳಿದ ಜಿಲ್ಲೆಗಳಲ್ಲಿ ಅ. 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

heavy-rain-with-thunderstorms-in-state-today-and-tomorrow
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ... ಹವಾಮಾನ ಇಲಾಖೆ ಮುನ್ಸೂಚನೆ

By

Published : Oct 23, 2021, 9:05 AM IST

ಬೆಂಗಳೂರು:ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ. 26ರಂದು ಪೂರ್ಣ ಪ್ರಮಾಣದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ತಗ್ಗಲಿರುವ ಮಳೆ ಪ್ರಮಾಣ:

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಅ. 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದೂ ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ನೀರಿಗಾಗಿ ಮಹಿಳೆಯರ ಜಗಳ.. ಜೀವಜಲವಿರದ ಊರಿಗೆ ಹುಡುಗಿ ಕೊಡಲ್ಲವೆಂದು ಕುಟುಂಬಸ್ಥರು ವಾಪಸ್​!

ABOUT THE AUTHOR

...view details