ಕರ್ನಾಟಕ

karnataka

ETV Bharat / state

ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ
ಮಳೆ

By

Published : Aug 5, 2022, 3:44 PM IST

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. ಶನಿವಾರದವರೆಗೆ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್ 6 ರವರೆಗೆ ಕರ್ನಾಟಕ ಕರಾವಳಿ ಮತ್ತು ಮಲೆನಾಡಿನ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚುಸಹಿತ ನಿರಂತರ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಲ್ಲಿ ಒಂದೇ ದಿನದಲ್ಲಿ ಸುಮಾರು 20 ಸೆಂ.ಮೀ ಗಿಂತಲೂ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಚಿತ್ರದುರ್ಗ, ಮೈಸೂರು ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ ಹಾಗು ವಿಜಯಪುರ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಆರೆಂಜ್ ಅಲರ್ಟ್ ಕೊಡಲಾಗಿದೆೆ. ಯಾದಗಿರಿ ಜಿಲ್ಲೆ, ಬಾಗಲಕೋಟೆ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ:ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ:ಭಾರಿ ಮಳೆಗೆ ವಿಜಯಪುರ ಸಂಗಮನಾಥ ದೇವಸ್ಥಾನ ಜಲಾವೃತ

ABOUT THE AUTHOR

...view details