ಬೆಂಗಳೂರು: ಒಂದು ಕಡೆ ಕೊರೊನಾ ಭೀತಿಯಾದ್ರೆ, ಮತ್ತೊಂದೆಡೆ ಮಳೆಯ ಭೀತಿ ಶುರುವಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಎದುರಾದರೆ, ಹಲವೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳಲ್ಲಿ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ - Heavy rainfall in coastal areas over the next 5 days
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಅಂದರೆ, ಆಗಸ್ಟ್ 2 ರಿಂದ 6ರವರೆಗೆ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ನನ್ನು ಹವಾಮಾನ ಇಲಾಖೆ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಅಂದರೆ, ಆಗಸ್ಟ್ 2 ರಿಂದ 6ರವರೆಗೆ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ನನ್ನು ಹವಾಮಾನ ಇಲಾಖೆ ಘೋಷಿಸಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆಗಸ್ಟ್ 3 ರಿಂದ ಬೆಳಗಾವಿ, ಧಾರವಾಡ, ಬಿಜಾಪುರ, ಹಾವೇರಿ, ಬೀದರ್, ಕಲಬುರಗಿಯ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಹಾಸನ, ಕೊಡುಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಕೊರತೆ ಎದುರಾಗಲಿದೆ ಅಂತ ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ. ಈ ಸಮಯದಲ್ಲಿ ಗಾಳಿ ಬಡಿತ ಜೋರಾಗಿ ಇರಲಿದ್ದು, ಸಮುದ್ರಕ್ಕೆ ಇಳಿಯದಂತೆ ಎಚ್ಚರ ನೀಡಲಾಗಿದೆ.