ಬೆಂಗಳೂರು:ರಾಜ್ಯವನ್ನು ಮುಂಗಾರು ಪ್ರವೇಶಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗುಸಹಿತ ಜೋರು ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಜೂನ್ 25 ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಕೋಲಾರ, ಹಾಸನ, ಚಾಮರಾಜನಗರ, ಕೊಡಗು, ಶಿವಮೊಗ್ಗ ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗುಸಹಿತ ಉತ್ತಮ ಮಳೆ ಮುನ್ಸೂಚನೆ ನೀಡಲಾಗಿದೆ.
ರಾಜಧಾನಿಯಲ್ಲಿ ಮಳೆ: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದ್ದು, ಎಲ್ಲೆಡೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.