ಕರ್ನಾಟಕ

karnataka

ETV Bharat / state

ನಾಳೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್​​ ಅಲರ್ಟ್ ಘೋಷಣೆ

ಈಗಾಗಲೇ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಭಾಗವೂ ಸೇರಿ ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಎದುರಾಗಿತ್ತು. ಆದರೆ ಇದೀಗ ರಾಜ್ಯದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್​​​ ಅಲರ್ಟ್​ ಘೋಷಣೆ ಮಾಡಿದೆ.

Heavy rains along the coastal area tomorrow .. orange alert from weather department
ನಾಳೆ ಕರಾವಳಿ ಭಾಗದಲ್ಲೀ ಭಾರೀ ಮಳೆ..ಆರೆಂಜ್​​ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

By

Published : Jul 18, 2020, 7:35 PM IST

ಬೆಂಗಳೂರು:ರವಿವಾರ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಮವಾರವೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ, ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಕೂಡ ಯೆಲ್ಲೊ ಅಲರ್ಟ್ ನೀಡಲಾಗಿದ್ದು, ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ.

ಮಂಗಳವಾರದಂದು ಬೆಂಗಳೂರು, ಬೆಂ. ಗ್ರಾಮಾಂತರ, ಕೋಲಾರ, ರಾಮನಗರಕ್ಕೂ ಯೆಲ್ಲೊ ಅಲರ್ಟ್ ನೀಡಲಾಗಿದೆ. ಜುಲೈ 23ರಂದು ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ABOUT THE AUTHOR

...view details