ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ 21ನೇ ತಾರೀಕಿನವರೆಗೂ ರಾಜ್ಯದಲ್ಲಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ: ನಾಲ್ಕು ದಿನ ಭಾರೀ ಮಳೆ ಸಾಧ್ಯತೆ - heavy rain in state
ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಳೆ ಮುನ್ನೆಚ್ಚರಿಕೆ ನೀಡಿದ್ದು ಇಂದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಾಗೂ ಕೆಲವೆಡೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಮಳೆ ಮುನ್ನೆಚ್ಚರಿಕೆ ನೀಡಿದೆ. ಇಂದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಾಗೂ ಕೆಲವೆಡೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಕೋಲಾರ ಹಾಗೂ ಶಿವಮೊಗ್ಗದಲ್ಲಿ ಎಲ್ಲೋ ಅಲರ್ಟ್ ಇದ್ದು, ವ್ಯಾಪಕವಾಗಿ ಮಳೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ.