ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಮುಂದುವರೆಯಲಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೀಗ ತುಂತುರು ಮಳೆಯಾಗುತ್ತಿದೆ. ಜೂನ್ ಮೊದಲ ವಾರದಲ್ಲಿಯೇ ನೈಋತ್ಯ ಮುಂಗಾರು ಕರ್ನಾಟಕಕ್ಕೆ ಆಗಮಿಸಿತ್ತು. 10 ದಿನಗಳಿಂದ ಮುಂಗಾರು ದುರ್ಬಲವಾಗಿತ್ತು ಎಂದು ಮಾಹಿತಿ ನೀಡಿದೆ.
ರಾಜ್ಯದಲ್ಲಿ ಜೂನ್ 14ರವರೆಗೆ ಭಾರಿ ಮಳೆ ಮುನ್ಸೂಚನೆ - ರಾಜ್ಯದಲ್ಲಿ ಮಳೆ
ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
![ರಾಜ್ಯದಲ್ಲಿ ಜೂನ್ 14ರವರೆಗೆ ಭಾರಿ ಮಳೆ ಮುನ್ಸೂಚನೆ Karnataka rain](https://etvbharatimages.akamaized.net/etvbharat/prod-images/768-512-15539264-thumbnail-3x2-news.jpeg)
ರಾಜ್ಯದಲ್ಲಿ ಮುಂದುವರಿದ ಮಳೆ
ಕಾರವಾರ, ತೀರ್ಥಹಳ್ಳಿ, ಸಾಗರ, ಕೊಪ್ಪ, ಭಟ್ಕಳ, ಅಂಕೋಲಾ, ಹೊನ್ನಾವರ, ಕುಮಟಾ, ಶಿರಸಿ ಮುಂತಾದೆಡೆ ನಿನ್ನೆಯಿಂದ ಮಳೆಯಾಗುತ್ತಿದ್ದು, ಜೂನ್ 14ರ ತನಕವೂ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇರಿದಂತೆ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.