ಬೆಂಗಳೂರು:ರಾಜ್ಯದಲ್ಲಿ ಮಳೆಯ ಪ್ರಮಾಣ ಮತ್ತೆ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಆಗಸ್ಟ್ 10ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶನಿವಾರ (ಆ.7ರಂದು) ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಶುಕ್ರವಾರ ಸಹಜವಾಗಿದ್ದು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ.
ಬೆಂಗಳೂರಲ್ಲಿ ಮಳೆ-ವಾಹನ ಸವಾರರ ಪರದಾಟ: