ಕರ್ನಾಟಕ

karnataka

ETV Bharat / state

ನಾಳೆ, ನಾಡಿದ್ದು ರಾಜ್ಯದ ಹಲವೆಡೆ ವ್ಯಾಪಕ ಮಳೆಯ ಮುನ್ಸೂಚನೆ

ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

y heavy rains in karnataka
y heavy rains in karnataka

By

Published : Oct 9, 2020, 5:10 PM IST

ಬೆಂಗಳೂರು:ರಾಜ್ಯದಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

ಬೆಂಗಳೂರಿಗೆ ಭಾರೀ ಮಳೆ ಮುನ್ಸೂಚನೆ:

ಬೆಂಗಳೂರಿನಲ್ಲೂ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಇಲಾಖೆ ಮಾಹಿತಿ ನೀಡಿದ್ದು, ಜನರು ಎಚ್ಚರಿಕೆವಹಿಸಬೇಕಿದೆ.

ಇದರ ಜತೆಗೆ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲೂ ವ್ಯಾಪಕ ಮಳೆ ಸುರಿಯುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಕ್ಟೋಬರ್​ 10 ಹಾಗೂ 11ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ABOUT THE AUTHOR

...view details