ಕರ್ನಾಟಕ

karnataka

ETV Bharat / state

ಶ್ರೀಮಂಜುನಾಥನ ಸನ್ನಿಧಿಯಲ್ಲಿ ನೀರಿನ ಬವಣೆ.. ಚೆಕ್ ಡ್ಯಾಂ ನಿರ್ಮಾಣದ ಬಗ್ಗೆೆ ಗಂಭೀರ ಚಿಂತನೆ! - Kannada news

ವೀರೇಂದ್ರ ಹೆಗ್ಗಡೆಯವರು ನೇತ್ರಾವತಿ ನದಿಗೆ ಚೆಕ್ ಡ್ಯಾಂ ನಿರ್ಮಿಸಿ ಮಳೆಗಾಲದಲ್ಲಿನ ನೀರನ್ನು ಹಿಡಿದಿಟ್ಟುಕೊಂಡರೆ ಬೇಸಿಗೆಯಲ್ಲಿ ತಲೆದೋರುವ ನೀರಿನ ಅಭಾವದ ಸಮಸ್ಯೆ ಬಗೆಹರಿಸಬಹುದೆಂದು ಸಲಹೆ ನೀಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

By

Published : May 20, 2019, 9:24 PM IST

ಬೆಂಗಳೂರು :ಧರ್ಮಸ್ಥಳದಲ್ಲಿ ಬೇಸಿಗೆಯಲ್ಲಿ ತಲೆದೋರುವ ನೀರಿನ ಕೊರತೆಯಾಗುವುದನ್ನ ತಪ್ಪಿಸಲು ನೇತ್ರಾವತಿ ನದಿಗೆ ಚೆಕ್ ಡ್ಯಾಂ ನಿರ್ಮಾಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೇಸಿಗೆಯಲ್ಲಿ ನೀರಿನ ಅಭಾವ ತಲೆದೋರಿದ್ದರಿಂದ ಉದ್ಭವಿಸಬಹುದಾದ ಸಮಸ್ಯೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ಜತೆ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್ ಚರ್ಚೆನಡೆಸಿದರು. ಸರಕಾರದ ಕಾಳಜಿಗೆ ಕೃತಜ್ಞತೆ ಸಲ್ಲಿಸಿದ ವೀರೇಂದ್ರ ಹೆಗ್ಗಡೆಯವರು, ನೇತ್ರಾವತಿ ನದಿಗೆ ಚೆಕ್ ಡ್ಯಾಂ ನಿರ್ಮಿಸಿ ಮಳೆಗಾಲದಲ್ಲಿನ ನೀರನ್ನು ಹಿಡಿದಿಟ್ಟುಕೊಂಡರೆ, ಬೇಸಿಗೆಯಲ್ಲಿ ತಲೆದೋರುವ ನೀರಿನ ಸಮಸ್ಯೆ ನಿವಾರಿಸಬಹುದೆಂದು ಸಲಹೆ ನೀಡಿದರು.

ತಕ್ಷಣ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಕಾರ್ಯದರ್ಶಿಗಳು, ದಕ್ಣಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಜತೆ ಮಾತನಾಡಿ ಚೆಕ್ ಡ್ಯಾಂ ನಿರ್ಮಿಸುವ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸಲು ಸೂಚಿಸಿದ್ದಾರೆ. ಅದರಂತೆ ಇಂದು ಸಂಜೆ ದಕ್ಷಿಣ ಕನ್ನಡ ಜಿಪಂ ಸಿಇಒ ಹಾಗು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಇತ್ತೀಚೆಗೆ ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರದಲ್ಲಿ ನೀರಿನ ಸಮಸ್ಯೆಯಿದೆ. ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಬರುವವರು ಸ್ವಲ್ಪದಿನ ಅದನ್ನ ಮುಂದೂಡಿ ಎಂದು ಮನವಿ ಮಾಡಿದ್ದರು‌. ಈ ಸಂಗತಿ ಸಾರ್ವಜನಿಕವಾಗಿ ಹೆಚ್ಚಿನ ಚರ್ಚೆಗೂ ಕಾರಣವಾಗಿತ್ತು. ಸಿಎಂ ಕುಮಾರಸ್ವಾಮಿ ಅವರು ಧರ್ಮಸ್ಥಳದ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮುಖ್ಯಕಾರ್ಯದರ್ಶಿಗಳಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದರು. ತಕ್ಷಣ ಸಿಎಸ್ ಅವರು ಹೆಗ್ಗಡೆಯವರ ಜತೆ ಮಾತನಾಡಿ ಚೆಕ್ಕ ಡ್ಯಾಂ ನಿರ್ಮಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ABOUT THE AUTHOR

...view details