ಬೆಂಗಳೂರು :ಗ್ರಾಮಾಂತರ ಜಿಲ್ಲೆಯ ಚಿಕ್ಕಬಳ್ಳಾಪುರ ಜೈಲಿನಲ್ಲಿ ಕೈದಿ ಎಸ್ಕೇಪ್ ಆಗಿದ್ದ ಬೆನ್ನಲ್ಲೇ ಕಾರಾಗೃಹ ಇಲಾಖೆ ಎಚ್ಚೆತ್ತು ಕೊಂಡಿದೆ. ರಾಜ್ಯದ ಎಲ್ಲಾ ಜೈಲುಗಳಿಗೂ ಸಂದೇಶ ರವಾನೆಯಾಗಿದ್ದು, ಪ್ರೊಬೆಷನರಿ ಪೊಲೀಸರಿಗೆ ಕೆಲಸದ ಜವಾಬ್ದಾರಿ ಕೊಡದಂತೆ ಸೂಚನೆ ನೀಡಲಾಗಿದೆ.
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಹೈ ಅಲರ್ಟ್: ಭದ್ರತೆ ಹೆಚ್ಚಿಸಲು ಕಾರಾಗೃಹ ಇಲಾಖೆ ಸೂಚಿಸಿರುವ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಾಂಪೌಂಡ್ ಸುತ್ತ ಭದ್ರತೆ ಹೆಚ್ಚಿಸಲು ಸೂಪರ್ಡೆಂಟ್ ಆದೇಶಿಸಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.