ಕರ್ನಾಟಕ

karnataka

ETV Bharat / state

ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತದೆ: ಸಿಎಂ ಯಡಿಯೂರಪ್ಪ - Cabinet expansion

ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

dsd
ಸಿಎಂ ಯಡಿಯೂರಪ್ಪ ಸ್ಪಷ್ಟನೆ

By

Published : Nov 19, 2020, 10:35 AM IST

ಬೆಂಗಳೂರು: ವರಿಷ್ಠರ ಜೊತೆ ಮಾತುಕತೆ ನಡೆಸಿದ್ದು ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎನ್ನುವುದು ಹೈಕಮಾಂಡ್ ತೀರ್ಮಾನದ ಮೇಲೆ ಅವಲಂಬಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಪಟ್ಟಿ ದೆಹಲಿಯಿಂದ ಬರಬೇಕು. ನಾನು ದೆಹಲಿಗೆ ಹೋಗಿ ಚರ್ಚೆ ಮಾಡಿ ಬಂದಿದ್ದೇನೆ. ಅವರು ಎಲ್ಲಾ ಕ್ಲಿಯರ್ ಮಾಡಿ 2-3 ದಿನಗಳಲ್ಲಿ ಪಟ್ಟಿ ಕಳುಹಿಸಿ ಕೊಡುತ್ತಾರೆ.

ದೆಹಲಿ ನಾಯಕರು ಏನು ಹೇಳುತ್ತಾರೋ ಹಾಗೆ ತೀರ್ಮಾನ ಮಾಡುತ್ತೇನೆ. ಎಲ್ಲರೂ ಹೈಕಮಾಂಡ್ ನಿರ್ದೇಶನದಂತೆ ಮುನ್ನಡೆಯುತ್ತೇವೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details