ಕರ್ನಾಟಕ

karnataka

ETV Bharat / state

ಡಿಕೆಶಿ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಕ್ರಮ ಪ್ರಶ್ನಿಸಿದ್ದ ಅರ್ಜಿ : ವಿಚಾರಣೆ ಮುಂದೂಡಿದ ಹೈಕೋರ್ಟ್ - DK Shivakumar petition

DK Shivakumar case in high court: ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

high-court-adjourned-hearing-of-dk-shivakumar-petition
ಡಿಕೆಶಿ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಕ್ರಮ ಪ್ರಶ್ನಿಸಿದ್ದ ಅರ್ಜಿ : ವಿಚಾರಣೆ ಮುಂದೂಡಿದ ಹೈಕೋರ್ಟ್

By ETV Bharat Karnataka Team

Published : Nov 22, 2023, 3:47 PM IST

ಬೆಂಗಳೂರು :ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಿಂದ ತನಿಖೆಗೆ ಅನುಮತಿ ನೀಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 29ಕ್ಕೆ ಮುಂದೂಡಿದೆ. ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಕ್ರಮವನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕ್ರಮ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿದೆ. ಇಂದು ಬೆಳಗ್ಗೆ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರದ (ಸಿಬಿಐ) ಪರ ವಾದ ಮಂಡಿಸುವುದಕ್ಕೆ ಕಾಲಾವಕಾಶ ಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಮನವಿ ಮಾಡಿದರು. ಮಧ್ಯಾಹ್ನ ಮತ್ತೆ ಅರ್ಜಿ ವಿಚಾರಣೆಗೆ ಬಂದ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರು. ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಡಿ ಕೆ ಶಿವಕುಮಾರ್ ಅವರು ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದು, ಅವರಿಗೆ ಸಂಬಂಧಿಸಿದ ದೆಹಲಿ ಸೇರಿದಂತೆ ವಿವಿಧ ಸ್ಥಳಗಳ ಮೇಲೆ 2017 ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ, ಶೋಧ ನಡೆಸಿತ್ತು. ಈ ವೇಳೆ 8.59ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು. ಡಿ ಕೆ ಶಿವಕುಮಾರ್ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಸಿಕ್ಕಿತ್ತು. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.

ಇದರ ಬಳಿಕ ಜಾರಿ ನಿರ್ದೇಶನಾಲಯವು ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿತ್ತು. ಇದನ್ನು ಆಧರಿಸಿ 2019 ರ ಸೆಪ್ಟೆಂಬರ್ 3 ರಂದು ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಆನಂತರ 2019 ರ ಸೆಪ್ಟೆಂಬರ್ 9 ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ಅಂದಿನ ರಾಜ್ಯ ಸರ್ಕಾರವು ಅನುಮತಿ ನೀಡಿತ್ತು.

ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಸಂತ್ರಸ್ತೆ ಮದುವೆಯಾಗುವುದಾಗಿ ಭರವಸೆ: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ABOUT THE AUTHOR

...view details