ಬೆಂಗಳೂರು:ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ2020-21ರ ಪುನರಾವರ್ತಿತರ ದ್ವಿತೀಯ ಪಿಯುಸಿ ಪರೀಕ್ಷೆ ಅಂಕಗಳನ್ನು ಪರಿಗಣಿಸುವಂತೆ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆಯನ್ನು ವಿಭಾಗೀಯ ಪೀಠವು ಸೋಮವಾರಕ್ಕೆ ಮುಂದೂಡಿದೆ.
ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ಅವರಿದ್ದ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಪರಿಹರಿಸಲು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
2020-21ನೇ ಸಾಲಿನಲ್ಲಿ ಪಿಯು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೇ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಆದರೆ, ಅವರ ಅಂಕಗಳನ್ನು ಸಿಇಟಿಯಲ್ಲಿ ಪಡೆದುಕೊಂಡಲ್ಲಿ ಸಿಇಟಿಯಲ್ಲಿ ಹೆಚ್ಚು ರ‍್ಯಾಂಕ್ ಸಿಗಲಿದೆ. ಇದರಿಂದ 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.