ಬೆಂಗಳೂರು:ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ 454 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಅ.19ರವರೆಗೆ ವಿಸ್ತರಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠದ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಅಭ್ಯರ್ಥಿಗಳ ಪೈಕಿ ಒಬ್ಬ ವಕೀಲರು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆಯನ್ನು ಅ.19ಕ್ಕೆ ಮುಂದೂಡಿತು.