ಬೆಂಗಳೂರು: ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರ ಆಸ್ತಿ ಜಪ್ತಿ ಮಾಡಲು ಸರ್ಕಾರ ರಚಿಸಿರುವ ಸಕ್ಷಮ ಪ್ರಾಧಿಕಾರ ಅಧಿಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಗೊಳಿಸಲು ಕೋರಿ ಮನ್ಸೂರ್‌ಖಾನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಸರ್ಕಾರದ ಆದೇಶಕ್ಕೆ ತಡೆ ನೀಡಿ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಐಎಂಎ ಹಗರಣ: ಸರ್ಕಾರದ ಸಕ್ಷಮ ಪ್ರಾಧಿಕಾರ ರಚನೆಗೆ ಹೈಕೋರ್ಟ್ ನಕಾರ - ಐಎಂಎ ಬಹುಕೋಟೆ ವಂಚನೆ ಪ್ರಕರಣ
ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರಿಗೆ ಸಂಬಂಧಿಸಿದ ಆಸ್ತಿ ಜಪ್ತಿ ಮಾಡಲು ಸರ್ಕಾರ ರಚಿಸ ಸಕ್ಷಮ ಪ್ರಾಧಿಕಾರ ಅಧಿಕಾರ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿ, ಆಕ್ಷೇಪಣೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
![ಐಎಂಎ ಹಗರಣ: ಸರ್ಕಾರದ ಸಕ್ಷಮ ಪ್ರಾಧಿಕಾರ ರಚನೆಗೆ ಹೈಕೋರ್ಟ್ ನಕಾರ](https://etvbharatimages.akamaized.net/etvbharat/prod-images/768-512-4715085-thumbnail-3x2-bgl.jpg)
ಬಹುಕೋಟೆ ವಂಚನೆ ಪ್ರಕರಣ
ಈ ಅರ್ಜಿಯನ್ನು ಅಕ್ಟೋಬರ್ 10ರಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿ ಮುಂದೂಡಲಾಗಿದೆ.