ಕರ್ನಾಟಕ

karnataka

ETV Bharat / state

ಹೈಕೋರ್ಟ್ ಕಟ್ಟಡ ಸ್ಥಳಾಂತರಿಸಲು ಕೋರಿರುವ ಅರ್ಜಿ: ಕಾಲಾವಕಾಶ ಕೋರಿದ ಆಡಳಿತ ವಿಭಾಗ

ಬೆಂಗಳೂರಿನ ಹೈಕೋರ್ಟ್ ಕಟ್ಟಡದ ನೆಲಮಹಡಿ ಕಟ್ಟಡದ ಕಚೇರಿಗಳನ್ನು ಸ್ಥಳಾಂತರಿಸುವ ಕುರಿತು ಹೈಕೋರ್ಟ್ ಪೀಠ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

high court
ಹೈಕೋರ್ಟ್

By ETV Bharat Karnataka Team

Published : Dec 2, 2023, 6:55 AM IST

ಬೆಂಗಳೂರು: ಹೈಕೋರ್ಟ್‌ ಕಟ್ಟಡ ವಿಸ್ತರಣೆಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗಳು ಪರಿಶೀಲನೆಯಲ್ಲಿವೆ ಎಂದು ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಶುಕ್ರವಾರ ಹೈಕೋರ್ಟ್‌ ಆಡಳಿತ ವಿಭಾಗ ಮಾಹಿತಿ ನೀಡಿದೆ.

ಬೆಂಗಳೂರಿನ ಹೈಕೋರ್ಟ್ ಕಟ್ಟಡದ ನೆಲಮಹಡಿ ಕಟ್ಟಡದ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ವಕೀಲ ಎಲ್. ರಮೇಶ್ ನಾಯಕ್ ಮತ್ತು ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ 30ಕ್ಕೂ ಅಧಿಕ ಎಕರೆ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಶರಣ ದೇಸಾಯಿ ಎಂಬುವರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ಅವರಿದ್ದ ನ್ಯಾಯಪೀಠಕ್ಕೆ ಹೈಕೋರ್ಟ್‌ ಆಡಳಿತ ವಿಭಾಗದ ಪರ ಹಾಜರಾದ ಹಿರಿಯ ವಕೀಲ ನಾಗಾನಂದ ವಿವರಿಸಿದರು. ಅಲ್ಲದೆ, ಹೈಕೋರ್ಟ್‌ ವಿಸ್ತರಣೆಗೆ ಸ್ಥಳಾವಕಾಶ ಒದಗಿಸುವ ಸಂಬಂಧ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗಳು ಹೈಕೋರ್ಟ್‌ ಕಟ್ಟಡ ಸಮಿತಿಯ ಪರಿಶೀಲನೆ ನಡೆಸುತ್ತಿದೆ. ಹಾಗಾಗಿ, ಸರ್ಕಾರದ ಪ್ರಸ್ತಾವನೆಗಳ ಮೇಲೆ ಸಮಿತಿಯ ಅಭಿಪ್ರಾಯ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿ ಪರಿಗಣಿಸಿದ ವಿಭಾಗೀಯ ಪೀಠ, ನಾಲ್ಕು ವಾರಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಅರ್ಜಿಯು 2023ರ ಸೆ.21ರಂದು ವಿಚಾರಣೆಗೆ ಬಂದಿದ್ದ ವೇಳೆ ರಾಜ್ಯ ಸರ್ಕಾರ ಪರ ವಕೀಲರು, ಕಬ್ಬನ್‌ ಪಾರ್ಕ್​​ನಲ್ಲಿರುವ ಚುನಾವಣೆ ಆಯೋಗದ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ, ಅಲ್ಲಿಯೇ ಹೈಕೋರ್ಟ್‌ ಆಡಳಿತ ವ್ಯವಹಾರಗಳ ನಿರ್ವಹಣೆಗಾಗಿ 10 ಮಹಡಿ ಮತ್ತು 3 ಮಹಡಿಯ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡುವುದು ಹಾಗೂ ಹೈಕೋರ್ಟ್‌ ಆವರಣದಲ್ಲಿರುವ ಕ್ಯಾಂಟೀನ್‌ ಕಟ್ಟಡದ ಮೇಲೆ ಕಟ್ಟಡವೊಂದನ್ನು ನಿರ್ಮಾಣ ಮಾಡಲು ಸರ್ಕಾರ ಉದ್ದೇಶಿಸಿದೆ. ಜೊತೆಗೆ, ಇತರೆ ಮೂರು ಪ್ರಸ್ತಾವನೆಗಳಿದ್ದು, ಅವುಗಳನ್ನು ಹೈಕೋರ್ಟ್‌ಗೆ ಸಲ್ಲಿಸಿದೆ ಎಂದು ತಿಳಿಸಿದ್ದರು. ಇದರಿಂದ ಸರ್ಕಾರದ ಪ್ರಸ್ತಾವನೆಗಳನ್ನು ಹೈಕೋರ್ಟ್‌ ಕಟ್ಟಡ ಸಮಿತಿ ಪರಿಶೀಲನೆ ನಡೆಸಿ ಅಭಿಪ್ರಾಯ ತಿಳಿಸಬೇಕು ಎಂದು ನ್ಯಾಯಪೀಠ ಸೂಚಿಸಿತ್ತು.

ಇದನ್ನೂ ಓದಿ:15 ವರ್ಷ ಹಿಂದಿನ ಅಪಘಾತ ಪ್ರಕರಣ: ಬೈಕ್ ಸವಾರನ ತಪ್ಪು ಸಾಬೀತು, ಪರಿಹಾರ ₹85 ಸಾವಿರಕ್ಕೆ ಇಳಿಕೆ

ABOUT THE AUTHOR

...view details