ಕರ್ನಾಟಕ

karnataka

ETV Bharat / state

ದತ್ತಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ನೇಮಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್

ದೇವಸ್ಥಾನದ ಪೂಜಾ ಕಾರ್ಯಗಳಿಗೆ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನಿ ಅವರನ್ನು ನೇಮಕ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018ರಲ್ಲಿ ಆದೇಶ ಹೊರಡಿಸಿದ್ದರು. ಸರ್ಕಾರದ ಈ ಆದೇಶ ಪ್ರಶ್ನಿಸಿ, ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿತ್ತು..

high-court
ಹೈಕೋರ್ಟ್

By

Published : Sep 28, 2021, 5:06 PM IST

ಬೆಂಗಳೂರು :ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠ ದೇವಸ್ಥಾನದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾ.19ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ದೇವಸ್ಥಾನದ ಪೂಜಾ ಕಾರ್ಯಗಳಿಗೆ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನಿ ಅವರನ್ನು ನೇಮಕ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018ರಲ್ಲಿ ಆದೇಶ ಹೊರಡಿಸಿದ್ದರು. ಸರ್ಕಾರದ ಈ ಆದೇಶ ಪ್ರಶ್ನಿಸಿ, ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದುಪಡಿಸಿ ಆದೇಶಿಸಿದೆ. ಇದೇ ವೇಳೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಕಾನೂನು ರೀತಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ಓದಿ:RSS - Taliban ನಡುವೆ ಇರುವ ವ್ಯತ್ಯಾಸವನ್ನ ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು: ಗೃಹ ಸಚಿವ

ABOUT THE AUTHOR

...view details