ಬೆಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಸುಮಾರು ಐದು ವರ್ಷಗಳ ಕಾಲ ಲೈಂಗಿಕ ಸಂಪರ್ಕ ಬೆಳೆಸಿ ಬಳಿಕ ವಿವಾಹವಾಗಲು ನಿರಾಕರಿಸಿದ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶಿಸಿದೆ. ತನ್ನ ವಿರುದ್ಧ ಯುವತಿ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಲ್ಲಿಕಾರ್ಜುನ ದೇಸಾಯಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಸಂತ್ರಸ್ತೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆದಿದೆ ಎಂಬುದನ್ನು ಒಪ್ಪಲಾಗುವುದಿಲ್ಲ:ಪ್ರಸ್ತುತ ಪ್ರಕರಣದಲ್ಲಿ ಒಂದೆರಡು ಅಲ್ಲ ಹಲವು ವರ್ಷಗಳಿಂದ ದೂರುದಾರ ಸಂತ್ರಸ್ತೆ ಮತ್ತು ಆರೋಪಿತರು ಪ್ರೀತಿಸುತ್ತಿದ್ದರು ಎಂದು ವಿವರಿಸಲಾಗಿದೆ. ಹೀಗಾಗಿ ಐದು ವರ್ಷಗಳ ಕಾಲ ಜೊತೆಗಿರುವಾಗ ಸಂತ್ರಸ್ತೆಯ ವಿರುದ್ಧವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂಬ ಅಂಶವನ್ನು ಒಪ್ಪಲಾಗುವುದಿಲ್ಲ. ಹೀಗಾಗಿ ಪ್ರಕರಣ ಮುಂದುವರಿದಲ್ಲಿ ಕಾನೂನಿನ ದುರುಪಯೋಗವಾಗಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅಲ್ಲದೇ, ಅರ್ಜಿದಾರರ ವಿರುದ್ಧ ಇಪಿಸಿ 376(ಬಲತ್ಕಾರ), 354 (ಬಲತ್ಕಾರಕ್ಕಾಗಿ ಹಲ್ಲೆ), 406(ನಂಬಿಕೆ ದ್ರೋಹ), 504 (ಉದ್ದೇಶಪೂರ್ವಕವಾಗಿ ಅವಮಾನ) ಸೆಕ್ಷನ್‌ಗಳ ಅಡಿ ದಾಖಲಿಸಿದ್ದ ಎಫ್‌ಐಅರ್ ಮತ್ತು ಈ ಸಂಬಂಧ ತನಿಖಾಧಿಕಾರಿಗಳು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದು ಪಡಿಸಿ ಆದೇಶಿಸಿದೆ.
ಇದನ್ನೂ ಓದಿ: ಹುಕ್ಕಾ ಬಾರ್ಗೆ ಆಹ್ವಾನಿಸಿದ ಇನ್ಸ್ಟಾಗ್ರಾಂ ಸ್ನೇಹಿತ : ವೈದ್ಯನ ಅಪ್ರಾಪ್ತ ಮಗಳ ಮೇಲೆ ಗ್ಯಾಂಗ್ ರೇಪ್!