ಬೆಂಗಳೂರು:ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಭೂ ವ್ಯಾಜ್ಯ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯ ಜಾಮೀನು ಅರ್ಜಿ ಬಗ್ಗೆ ಸೋಮವಾರ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರು, ಭ್ರಷ್ಟಾಚಾರ ನಿಗ್ರಹ ದಳದಂತಹ ಸಂಸ್ಥೆಗಳಿಗೆ ಮುಖ್ಯಸ್ಥರನ್ನು ನೇಮಕ ಮಾಡುವಾಗ ಕಳಂಕ ಇರುವಂತಹ ಅಧಿಕಾರಿಗಳನ್ನು ಪರಿಗಣಿಸಬಾರದೆಂದು ಸರಕಾರಕ್ಕೆ ಸೂಚಿಸಿದರು.
ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಮುಖ್ಯಸ್ಥರನ್ನು ನೇಮಿಸುವಾಗ ಸರ್ಕಾರವು ಸಂಬಂಧಪಟ್ಟ ಅಧಿಕಾರಿಯ ಪೂರ್ವಾಪರಗಳನ್ನು ವಿಚಾರಿಸಬೇಕು. ಎಸಿಬಿಗೆ ನೇಮಕವಾಗುವ ಅಧಿಕಾರಿ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಎಸಿಬಿ ಅಥವಾ ಲೋಕಾಯುಕ್ತ ತನಿಖೆ ನಡೆಯುತ್ತಿರಬಾರದು ಎಂದೂ ಸಹ ನ್ಯಾಯಾಲಯ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಡಳಿತ ಮತ್ತು ಸಿಬ್ಬಂದಿ ಸುದಾರಣಾ ಇಲಾಖೆ ಕಾರ್ಯದರ್ಶಿಗೆ ನಿರ್ದೇಶನಗಳನ್ನು ನೀಡಿದೆ.