ಕರ್ನಾಟಕ

karnataka

ETV Bharat / state

ಮ್ಯಾನ್​ಹೋಲ್​​ ಸ್ವಚ್ಛ ಪದ್ಧತಿ ತಡೆಯಲು ಸ್ಥಳೀಯ ಸಂಸ್ಥೆಗಳಿಗೆ ಆದೇಶಿಸಿ: ಸರ್ಕಾರಕ್ಕೆ ಹೈಕೋರ್ಟ್ ತಾಕೀತು - State High Court

ಮ್ಯಾನ್‌ಹೋಲ್ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

High Court Direction to State Government
ಸರ್ಕಾರಕ್ಕೆ ಹೈಕೋರ್ಟ್ ತಾಕೀತು

By

Published : Feb 17, 2021, 7:22 PM IST

ಬೆಂಗಳೂರು: ಮನುಷ್ಯರಿಂದ ಶೌಚಗುಂಡಿ (ಮ್ಯಾನ್‌ಹೋಲ್)ಗಳನ್ನು ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಆದೇಶಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ಎಐಸಿಸಿಟಿಯು ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು, ಕಲಬುರಗಿ ಜಿಲ್ಲೆಯ ಕೈಲಾಶ್ ನಗರದಲ್ಲಿ ಜನವರಿ 28ರಂದು ಮ್ಯಾನ್​ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟ ಪ್ರಕರಣದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು. ಜೊತೆಗೆ ಪ್ರಕರಣದ ಮೊದಲ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಐದನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರಬೇಕಿದೆ. ವರದಿ ಬಂದ ನಂತರವಷ್ಟೇ ತನಿಖಾಧಿಕಾರಿಗಳು ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯ ಎಂದು ವಿವರಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ಶೀಘ್ರ ಪಡೆಯಲು ಪ್ರಯತ್ನಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿತು. ಹಾಗೆಯೇ ಮೃತ ಕಾರ್ಮಿಕರ ಕುಟುಂಬಗಳ ಸದಸ್ಯರಿಗೆ ಅನುಕುಂಪದ ಆಧಾರದ ಮೇಲೆ ಗುತ್ತಿಗೆ ಆಧಾರಿತ ನೌಕರಿ ಕಲ್ಪಿಸುವ ಕುರಿತು ಮುಂದಿನ ವಿಚಾರಣೆ ವೇಳೆ ನಿಲುವು ತಿಳಿಸುವಂತೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸೂಚಿಸಿ ವಿಚಾರಣೆಯನ್ನು ಮಾರ್ಚ್ 1ಕ್ಕೆ ಮುಂದೂಡಿತು.

ABOUT THE AUTHOR

...view details