ಕರ್ನಾಟಕ

karnataka

ETV Bharat / state

ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಿರುವ ಕುರಿತು ವಿವರಣೆ ನೀಡಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ - ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ

ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಮತ್ತು ಒತ್ತುವರಿಯಾದ ಸರ್ಕಾರ ಭೂಮಿಯನ್ನು ತೆರವುಗೊಳಿಸಿರುವ ಬಗ್ಗೆ ವಿವರಣೆ ನೀಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

High Court directs the government  provision of cemetery land  Karnataka High court  ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ  ಸ್ಮಶಾನ ಭೂಮಿ ಒದಗಿಸಿರುವ ಕುರಿತು ವಿವರಣೆ  ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ  ಒತ್ತುವರಿಯಾದ ಸರ್ಕಾರ ಭೂಮಿ  ತೆರವುಗೊಳಿಸಿರುವ ಬಗ್ಗೆ ವಿವರಣೆ ನೀಡಲು ಹೈಕೋರ್ಟ್  ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ  ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ  ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ
ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಿರುವ ಕುರಿತು ವಿವರಣೆ

By

Published : Aug 10, 2023, 7:44 AM IST

ಬೆಂಗಳೂರು :ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೆ ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ಒದಗಿಸಲು ಹಾಗೂ ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ವಿರುದ್ಧ ಅರ್ಜಿದಾರರು ಎತ್ತಿರುವ ಆಕ್ಷೇಪಗಳಿಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾ. ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಈ ನಿರ್ದೆಶನ ನೀಡಿ ವಿಚಾರಣೆ ಮುಂದೂಡಿದೆ.

ರಾಜ್ಯದಲ್ಲಿ ಜನಸವತಿ ಇರುವ ಎಲ್ಲ ಗ್ರಾಮಗಳಿಗೆ ಶವ ಸಂಸ್ಕಾರಕ್ಕಾಗಿ ಸ್ಮಶಾನ ಜಾಗ ಮಂಜೂರು ಮಾಡಬೇಕು. ಒತ್ತುವರಿಯಾದ ಸರ್ಕಾರದ ಜಮೀನನ್ನು ತೆರವುಗೊಳಿಸಬೇಕು ಎಂದು 2019ರ ಆಗಸ್ಟ್ 20ರಂದು ಹೈಕೋರ್ಟ್ ಆದೇಶ ನೀಡಿತ್ತು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳುತ್ತಾ ಬಂದಿದೆ. ಆದರೆ, ವಾಸ್ತವ ಸಂಗತಿ ಬೇರೆಯೇ ಇದೆ. ಇನ್ನೂ ಅನೇಕ ಗ್ರಾಮಗಳಿಗೆ ಶವ ಸಂಸ್ಕಾರಕ್ಕೆ ಸ್ಮಶಾನ ಜಾಗ ಒದಗಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಹಾಸನ ಜಿಲ್ಲೆ ಅರಕಲಗೋಡಿನಲ್ಲಿ ಕಳೆದ ತಿಂಗಳು ದಲಿತ ವ್ಯಕ್ತಿಯೊಬ್ಬರು ಮೃತಪಟ್ಟ ಸಂದರ್ಭದಲ್ಲಿ ಶವಸಂಸ್ಕಾರಕ್ಕೆ ಜಾಗ ಇಲ್ಲದ ಕಾರಣ, ಮೃತರ ಮನೆ ಮುಂದೆಯೇ ಶವಸಂಸ್ಕಾರ ನಡೆದಿದೆ. ಖುದ್ದು ಸ್ಥಳಕ್ಕೆ ತಾನು ಭೇಟಿ ಕೊಟ್ಟಿದ್ದೆ. ಇನ್ನೂ ಸ್ಮಶಾನ ಜಾಗ ಒದಗಿಸಬೇಕಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಅರ್ಜಿದಾರರು ತಮ್ಮ ಆಕ್ಷೇಪಣಾ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಹೈಕೋರ್ಟ್ ಆದೇಶ ಮಾಡಿದ್ದಾಗ ಒತ್ತುವರಿಯಾದ ಸರ್ಕಾರಿ ಜಮೀನಿನ ಪ್ರಮಾಣ 11.77 ಲಕ್ಷ ಎಕರೆಗೂ ಅಧಿಕ ಇತ್ತು. ಈಗ ಒತ್ತುವರಿಯಾದ ಸರ್ಕಾರಿ ಜಮೀನಿನ ಪ್ರಮಾಣ 14.62 ಲಕ್ಷ ಎಕರೆ ಇದೆ. ಈ ರೀತಿ ಸರ್ಕಾರದ ಜಮೀನಿನ ಒತ್ತುವರಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಮೈಸೂರು ತಾಲೂಕಿನಲ್ಲಿಒತ್ತುವರಿಯಾಗಿರುವ 2.25 ಎಕರೆ ಸ್ಮಶಾನ ಜಾಗ 10 ವರ್ಷ ಕಳೆದರೂ ತೆರವುಗೊಳಿಸಿಲ್ಲ. ನನಗೆ ಲಭ್ಯವಾಗಿರುವ ಮಾಹಿತಿ ಪ್ರಕಾರವೇ 16 ಗ್ರಾಮಗಳ ನಿವಾಸಿಗಳು ತಮ್ಮ ಸಮುದಾಯಕ್ಕೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರಾತಿಗೆ ಕೋರಿದ್ದಾರೆ.

ಮನವಿ ಸಲ್ಲಿಸಿದವರಲ್ಲಿ ಮುಸ್ಲಿಂ, ಬೌದ್ಧ ಹಾಗೂ ಜೈನ ಸಮುದಾಯದವರು ಇದ್ದಾರೆ. ಸ್ಮಶಾನಕ್ಕಾಗಿ ಹೆಚ್ಚುವರಿ ಭೂಮಿ ಮಂಜೂರಾತಿಗೆ ಕೋರಲಾಗಿದ್ದು, ಅವುಗಳನ್ನು ಸರ್ಕಾರ ಪರಿಗಣಿಸಬೇಕಿದೆ ಎಂದು ಅರ್ಜಿದಾರರು ತಮ್ಮ ಆಕ್ಷೇಪಣಾ ಪ್ರಮಾಣಪತ್ರದಲ್ಲಿ ವಿವರಿಸಿದ್ದಾರೆ. ಈ ಅಂಶಗಳಿಗೆ ಸಂಬಂಧಿಸಿದಂತೆ ಸರ್ಕಾರ ವಿವರಣೆ ನೀಡಬೇಕಾಗಿದೆ.

ಓದಿ:ವಿಪಕ್ಷ ನಾಯಕರಿಲ್ಲದ ಪರಿಣಾಮ ಪಿಸಿಎ ಸದಸ್ಯರ ನೇಮಕ್ಕೆ ವಿಳಂಬ: ರಾಜ್ಯ ಸರ್ಕಾರ

ABOUT THE AUTHOR

...view details