ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ಎಲ್ಲ ಟ್ರಾನ್ಸ್ಫಾರ್ಮರ್ಗಳನ್ನು ಮುಂದಿನ ಮೂರು ತಿಂಗಳಲ್ಲಿ ಸ್ಥಳಾಂತರಿಸಿರುವ ವರದಿ ಸಲ್ಲಿಸಬೇಕು ಎಂದು ಬೆಸ್ಕಾಂಗೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರು ನಗರದ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ಟ್ರಾನ್ಸ್ಫಾರ್ಮರ್ ತೆರವು ಮಾಡುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ವಿಭಾಗೀಯ ಪೀಠ ಸೂಚನೆ ನೀಡಿತು.
ಪಾದಚಾರಿ ಮಾರ್ಗದಲ್ಲಿರುವ ಟ್ರಾನ್ಸ್ಫಾರ್ಮರ್ ತೆರವು ಮಾಡುವ ಕಾರ್ಯ ಮುಂದುವರೆಸಬೇಕು. ಈ ಸಂಬಂಧ ವರದಿ ಸಲ್ಲಿಸಬೇಕು ಎಂದು ತಿಳಿಸಿ ವಿಚಾರಣೆ ಮುಂದೂಡಿತು. ಅಲ್ಲದೇ, ಮುಂದಿನ ಮೂರು ತಿಂಗಳಲ್ಲಿ ಎಲ್ಲ ಟ್ರಾನ್ಸ್ಫಾರ್ಮರ್ ತೆರವು ಮಾಡಬೇಕು. ಜೊತೆಗೆ, ಅನುಷ್ಠಾನ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿತು.