ಕರ್ನಾಟಕ

karnataka

ETV Bharat / state

ಮುರುಘಾ ಶರಣರ ಜಾಮೀನು ಅರ್ಜಿ: ರೋಸ್ಟರ್ ಪ್ರಕಾರ ವಿಚಾರಣೆಗೆ ನಿಗದಿ ಮಾಡಲು ಹೈಕೋರ್ಟ್​ ಸೂಚನೆ - murugha swamiji bail plea

ಪೋಕ್ಸೋ ಕಾಯ್ದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಜಾರ್ಮಿನು ಅರ್ಜಿಯನ್ನು ರೋಸ್ಟರ್ ಪ್ರಕಾರ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್​​ಗೆ ಹೈಕೋರ್ಟ್​ ಸೂಚನೆ ನೀಡಿದೆ.

ಮುರುಘಾ ಶರಣರ ಜಾಮೀನು ಅರ್ಜಿ
ಮುರುಘಾ ಶರಣರ ಜಾಮೀನು ಅರ್ಜಿ

By

Published : Jun 19, 2023, 12:49 PM IST

ಬೆಂಗಳೂರು:ಅಪ್ರಾಪ್ತ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ರೋಸ್ಟರ್ ಪ್ರಕಾರ ನಿಗದಿ ಮಾಡುವಂತೆ ಹೈಕೋರ್ಟ್ ಪೀಠ ರಿಜಿಸ್ಟ್ರಾರ್ ಜನರಲ್​​ಗೆ ಸೂಚನೆ ನೀಡಿದೆ.

ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ, ರೋಸ್ಟರ್ ಪ್ರಕಾರ ಅರ್ಜಿಯ ವಿಚಾರಣೆ ನಿಗದಿ ಪಡಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್​ಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಮರುಘಾ ಶರಣರಿಂದ ಅರ್ಜಿ ಸಲ್ಲಿಕೆ:ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಬ್ಬರು ಬಾಲಕಿಯರು ಆರೋಪಿಸಿದ ಹಿನ್ನೆಲೆಯಲ್ಲಿ ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ 2022ರ ಆಗಸ್ಟ್‌ 26ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಿದ್ರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಕಾನೂನು ವಿಚಾರಣೆಯ ವಿವಿಧ ಹಂತಗಳ ಪ್ರಕ್ರಿಯೆಯನ್ನು ಎದುರಿಸುತ್ತಿದ್ದಾರೆ.

ಈ ನಡುವೆ ಇತ್ತೀಚೆಗಷ್ಟೇ ಹೈಕೋರ್ಟ್‌, ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕ್ರಿಮಿನಲ್‌ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ 2023ರ ಜುಲೈ 1ರವರೆಗೆ ತಡೆ ನೀಡಿದೆ. ಈ ಕುರಿತ ಅರ್ಜಿ ವಿಚಾರಣಾ ಹಂತದಲ್ಲಿದೆ.

ಪ್ರಕರಣದ ಹಿನ್ನೆಲೆ ಏನು?ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015ರ ವಿವಿಧ ಕಲಂಗಳ ಅಡಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳ ಸಂಬಂಧ ಸೆಷನ್ಸ್‌ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಅಂತಿಮ ವರದಿ ಸಲ್ಲಿಸಿದ್ದಾರೆ. ಇದರನ್ವಯ ನ್ಯಾಯಾಲಯ ದೋಷಾರೋಪ ಹೊರಿಸಿ ಸಾಕ್ಷಿ ವಿಚಾರಣೆ ಪ್ರಕ್ರಿಯೆ ಪ್ರಾರಂಭವಾಗಿದೆ.

ಮುರುಘಾ ಮಠದ ಆಡಳಿತಾಧಿಕಾರಿ ನೇಮಕ ಆದೇಶ ರದ್ದು:ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಆದ್ದರಿಂದ ವಸ್ತ್ರದ ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು. ಆದರೆ ಬಳಿಕ ಸರ್ಕಾರದ ನೇಮಕಾತಿ ಆದೇಶವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ಬಳಿಕ ಹೈಕೋರ್ಟ್ ವಿಚಾರಣೆ ನಡೆಸಿ, ಸರ್ಕಾರದ ನೇಮಕಾತಿ ಆದೇಶ ಸಂವಿಧಾನ ಬಾಹಿರ ಎಂದು ನೇಮಕಾತಿಯನ್ನು ರದ್ದುಪಡಿಸಿತ್ತು.

ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅಗತ್ಯ ಇಲ್ಲ ಅಂತಾ ಅಡ್ವೊಕೇಟ್ ಜನರಲ್ ಕಚೇರಿ ಅಭಿಪ್ರಾಯಪಟ್ಟಿತ್ತು.

ಇದನ್ನೂ ಓದಿ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದು, ಮೇಲ್ಮನವಿ ಅಗತ್ಯವಿಲ್ಲ: ಅಡ್ವೋಕೇಟ್ ಜನರಲ್ ಕಚೇರಿ ಅಭಿಪ್ರಾಯ

ABOUT THE AUTHOR

...view details