ಕರ್ನಾಟಕ

karnataka

ETV Bharat / state

ಶಿವಕುಮಾರ ಶ್ರೀಗಳಿಗೆ ಭಾರತರತ್ನ ನೀಡಲು ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - Bharat Ratna award

ಸಿದ್ಧಗಂಗಾ ಮಠದ ದಿ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್​ನಲ್ಲಿ ವಜಾಗೊಂಡಿದೆ.

high-court dismissed pil-to-seeking-to-direct-bharat-ratna-award-for-shivakumar-shri
ಶಿವಕುಮಾರ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ಕೊಡಲು ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

By

Published : Apr 1, 2022, 5:29 PM IST

ಬೆಂಗಳೂರು:ನಡೆದಾಡುವ ದೇವರು, ಸಿದ್ಧಗಂಗಾ ಮಠದ ದಿ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ರೆಹಾನ್ ಖಾನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ, ಭಾರತರತ್ನ ನೀಡುವಂತೆ ಪ್ರಧಾನಮಂತ್ರಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಪ್ರಶಸ್ತಿ ನೀಡುವ ಕುರಿತು ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದೆ.

ಸಿದ್ಧಗಂಗಾ ಮಠದಲ್ಲಿ ತ್ರಿವಿಧ ದಾಸೋಹ ನಡೆಸುವ ಮೂಲಕ ಲಕ್ಷಾಂತರ ಮಂದಿ ಬದುಕಿಗೆ ಬೆಳಕಾದ ಶಿವಕುಮಾರ ಸ್ವಾಮೀಜಿ ಅವರು ಭಾರತರತ್ನ ಪ್ರಶಸ್ತಿದೆ ಎಲ್ಲ ರೀತಿಯಲ್ಲೂ ಅರ್ಹರಿದ್ದಾರೆ. ಆದರೆ, ಸರ್ಕಾರ ಅವರಿದ್ದಾಗಲೂ ಭಾರತ ರತ್ನ ಪ್ರಶಸ್ತಿ ನೀಡಲಿಲ್ಲ. ಹೀಗಾಗಿ, ಅವರ ಸೇವೆ ಪರಿಗಣಿಸಿ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ ಪ್ರಧಾನಮಂತ್ರಿ ಅವರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ:ಎಲ್ಲಿವರೆಗೆ ಒಲೆ ಉರಿಯುತ್ತಿರುತ್ತದೆಯೋ ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಿರುತ್ತೆ; ಸಿಎಂ

ABOUT THE AUTHOR

...view details