ಕರ್ನಾಟಕ

karnataka

ETV Bharat / state

SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಸಂತಸ ವ್ಯಕ್ತಪಡಿಸಿದ ಸಚಿವ ಸುರೇಶ್​ ಕುಮಾರ್ - ಸಚಿವ ಸುರೇಶ್ ಕುಮಾರ್

ಎಸ್ಎಸ್ಎಲ್​​ಸಿ ಪರೀಕ್ಷೆ ರದ್ದುಗೊಳಿಸುವಂತೆ ಕೆಲವು ಶಿಕ್ಷಣ ತಜ್ಞರು, ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದೆ.

high court dismisses cancellation of sslc exam plea
SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

By

Published : Jul 12, 2021, 4:44 PM IST

ಬೆಂಗಳೂರು:ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠವೇ ಮಾಡದೇ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಹಲವು ಶಿಕ್ಷಣ ತಜ್ಞರು, ಪೋಷಕರು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಪಿಐಎಲ್​ ವಜಾಗೊಂಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ನ್ಯಾಯಾಲಯವೂ ಸಹ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದು ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದಿದ್ದಾರೆ.‌

ಈ ಸಲ ನಡೆಯುತ್ತಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್.ಒ.ಪಿ. ಪಾಲನೆ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್, SSLC ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ತಿಳಿಸಿದ್ದಾರೆ.

ಈ ತೀರ್ಪು ನೀಡುವ ಮೂಲಕ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ ಎಂದಿದ್ದಾರೆ.

ಕಳೆದ ವರ್ಷವೂ ಎಸ್ಎಸ್ಎಲ್​​ಸಿ ಪರೀಕ್ಷೆ ಸಂಬಂಧ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರ ಸಲ್ಲಿಸಿದ್ದ ಎಸ್.ಎಲ್.ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು ಎಂದು ಹಳೇ ಘಟನೆ ನೆನಪಿಸಿಕೊಂಡರು.

ABOUT THE AUTHOR

...view details