ಕರ್ನಾಟಕ

karnataka

ETV Bharat / state

ಕೇಂದ್ರದ EIA ಕರಡು ಅಧಿಸೂಚನೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ - Evaluation -2020 Draft Notification

ಕೇಂದ್ರ ಸರ್ಕಾರದ ಪರಿಸರ ಪರಿಣಾಮ ಮೌಲ್ಯಮಾಪನ-2020 ಕರಡು ಅಧಿಸೂಚನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಮುಂದಿನ ಆದೇಶದವರೆಗೂ ವಿಸ್ತರಿಸಿದೆ.

High Court
ಹೈಕೋರ್ಟ್

By

Published : Sep 7, 2020, 11:37 PM IST

ಬೆಂಗಳೂರು: ಕೇಂದ್ರ ಸರ್ಕಾರದ ಪರಿಸರ ಪರಿಣಾಮ ಮೌಲ್ಯಮಾಪನ-2020 ಕರಡು ಅಧಿಸೂಚನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಮುಂದಿನ ಆದೇಶದವರೆಗೂ ವಿಸ್ತರಿಸಿದೆ.

ಕನ್ನಡವೂ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಕರಡು ಅಧಿಸೂಚನೆ ಪ್ರಕಟಿಸಲು ಕೇಂದ್ರ ಸರ್ಕಾರ ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ, ಕರಡು ಅಧಿಸೂಚನೆಗೆ ಆಗಸ್ಟ್ 5ರಂದು ತಡೆ ನೀಡಿ ಮಧ್ಯಂತರ ಆದೇಶ ನೀಡಿತ್ತು. ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವ ಕಾಲಾವಕಾಶವನ್ನು ವಿಸ್ತರಿಸಲು ಮತ್ತು ರಾಜ್ಯ ಭಾಷೆಗಳಲ್ಲಿ ಕರಡು ಪ್ರಕಟಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿದಾರರು ಪಿಐಎಲ್ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ‌ ಪರ ವಕೀಲರು, ಕರಡನ್ನು ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಮಾತ್ರ ಪ್ರಕಟಿಸಲು ಸಾಧ್ಯವಿದೆ. ರಾಜ್ಯಗಳ ಅಧಿಕೃತ ಭಾಷೆಯಲ್ಲಿ ಗೆಜೆಟ್ ಹೊರಡಿಸುವ ಅಗತ್ಯ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ವಾದಿಸಿದ್ದರು. ಅರ್ಜಿದಾರರ ಪರ ವಕೀಲರು ಸಂವಿಧಾನದ ಆಶಯದಂತೆ ದೇಶದ ಪ್ರತಿಯೊಬ್ಬ ಪ್ರಜೆಗೂ ಸರ್ಕಾರದ ನಿಲುವುಗಳನ್ನು ತಿಳಿದುಕೊಳ್ಳುವ ಹಕ್ಕಿದೆ. ಕರಡು ಅಧಿಸೂಚನೆ ಪ್ರಸ್ತುತ ಮತ್ತು ಭವಿಷ್ಯದಲ್ಲಿ ಕೈಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿ ಯೋಜನೆಗಳ ಮೇಲೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ತಲುಪುವ ಅಗತ್ಯವಿದೆ ಎಂದು ವಾದಿಸಿದ್ದರು.

ಅರ್ಜಿದಾರರ ವಾದ ಪರಿಗಣಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, 2011 ರ ಜನಗಣತಿ ಪ್ರಕಾರ ದೇಶದಲ್ಲಿ ಶೇ.43ರಷ್ಟು ಜನಕ್ಕೆ ಹಿಂದಿ ಭಾಷೆ ತಿಳಿದಿದೆ. ಹಿಂದಿ ತಿಳಿಯದ ಜನ ಶೇ. 57 ರಷ್ಟಿದ್ದಾರೆ. ಆದ್ದರಿಂದ ಕರಡು ಅಧಿಸೂಚನೆಯನ್ನು ಕನ್ನಡವೂ ಸೇರಿದಂತೆ ಆಯಾ ರಾಜ್ಯ ಭಾಷೆಗಳಲ್ಲಿ ಪ್ರಕಟಿಸಿ, ಸಾರ್ವಜನಿಕರಿಗೆ ತಲುಪುವಂತೆ ವ್ಯಾಪಕ ಪ್ರಚಾರ ನೀಡಬೇಕು. ಅಲ್ಲಿವರೆಗೂ, ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಬಾರದು ಎಂದು ಆಗಸ್ಟ್ 5 ರಂದು ಮಧ್ಯಂತರ ಆದೇಶ ಹೊರಡಿಸಿತ್ತು.

ABOUT THE AUTHOR

...view details