ಬೆಂಗಳೂರು :ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್ ಪೂರ್ಣ ಪೀಠ ತೀರ್ಪನ್ನು ಕಾಯ್ದಿರಿಸಿದೆ.
ಈ ಕುರಿತಂತೆ ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜು ವಿದ್ಯಾರ್ಥಿನಿ ರೇಷಮ್ ಹಾಗೂ ಇತರ ವಿದ್ಯಾರ್ಥಿನಿಯರ ಪರ ಪೋಷಕರು ಸಲ್ಲಿಸಿದ್ದ 9 ರಿಟ್ ಅರ್ಜಿಗಳು ಹಾಗೂ 35ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.