ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯ (ಫೆಮಾ) ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇಡಿ) ಚೀನಾದ ಶಿಯೋಮಿ (Xiaomi) ಸ್ಥಂಸ್ಥೆಯ ಬ್ಯಾಂಕ್ ಖಾತೆಗಳಿಂದ 5,551 ಕೋಟಿ ರೂ. ಜಪ್ತಿ ಮಾಡಿದ್ದ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸ್ಥಳೀಯ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದ್ದ ಇಡಿ ಕ್ರಮ ಪ್ರಶ್ನಿಸಿ ಶಿಯೋಮಿ ಟೆಕ್ನಾಲಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಮಾಡಿದೆ. ಜಾರಿ ನಿರ್ದೇಶನಾಲಯವು ಕಳೆದ ವಾರ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಬ್ಯಾಂಕ್ ಆಸ್ತಿಗಳನ್ನು ವಶಪಡಿಸಿಕೊಂಡಿತ್ತು. ಕಂಪನಿಯು ‘ರಾಯಧನದ ಸೋಗಿನಲ್ಲಿ’ ಒಂದು ಶಿಯೋಮಿ ಗ್ರೂಪ್ ಘಟಕ ಸೇರಿದಂತೆ ಮೂರು ವಿದೇಶಿ ಮೂಲದ ಸಂಸ್ಥೆಗಳಿಗೆ ಹಣವನ್ನು ಅಕ್ರಮವಾಗಿ ರವಾನೆ ಮಾಡಿದೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಂಡಿತ್ತು.