ಬೆಂಗಳೂರು :ನಗರದಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ನಡೆಸಲಾಗುತ್ತಿರುವ ಸಮೀಕ್ಷೆಯನ್ನು ಪೂರ್ಣಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್ ಎರಡು ತಿಂಗಳ ಕಾಲಾವಕಾಶ ನೀಡಿದೆ.
ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2013ರಲ್ಲಿ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ ಹಾಜರಾಗಿ ನಗರದಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದೆ. 2021ರ ಸೆಪ್ಟೆಂಬರ್ ವೇಳೆಗೆ ಶೇ.51ರಷ್ಟು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.