ಕರ್ನಾಟಕ

karnataka

ETV Bharat / state

ಭೂ ಸುಧಾರಣೆ ಕಾಯ್ದೆ ತಿದ್ದಪಡಿ ಸುಗ್ರೀವಾಜ್ಞೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್ ಮಧ್ಯಂತರ ಆದೇಶ - High Court interim order

ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು 2ನೇ ಬಾರಿ ಹೊರಡಿಸಿರುವ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್​, ಸುಗ್ರೀವಾಜ್ಞೆ ಆಧರಿಸಿ ಕೈಗೊಳ್ಳುವ ಯಾವುದೇ ಕ್ರಮ ಹೈಕೋರ್ಟ್ ನೀಡುವ ಅಂತಿಮ ಆದೇಶಕ್ಕೆ ಒಳಪಡಲಿದೆ ಎಂದು ಸ್ಪಷ್ಟಪಡಿಸಿ, ವಿಚಾರಣೆ ಮುಂದೂಡಿತು.

High Court interim order
ಹೈಕೋರ್ಟ್

By

Published : Dec 2, 2020, 9:05 PM IST

ಬೆಂಗಳೂರು :ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಹೊರಡಿಸಿರುವ ಸುಗ್ರೀವಾಜ್ಞೆ ಅನುಸಾರ ಕೈಗೊಳ್ಳುವ ಎಲ್ಲ ಕ್ರಮಗಳೂ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ ಒಳಪಡಲಿವೆ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು 2ನೇ ಬಾರಿ ಹೊರಡಿಸಿರುವ ಸುಗ್ರೀವಾಜ್ಞೆ ಪ್ರಶ್ನಿಸಿ ಬಾಗಲಕೋಟೆಯ ಸಾಮಾಜಿಕ ಹೋರಾಟಗಾರ ನಾಗರಾಜ ಶೇಷಪ್ಪ ಹೊಂಗಲ್ ಹಾಗೂ ಬೆಂಗಳೂರಿನ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಸುಗ್ರೀವಾಜ್ಞೆ ಆಧರಿಸಿ ಕೈಗೊಳ್ಳುವ ಯಾವುದೇ ಕ್ರಮ ಹೈಕೋರ್ಟ್ ನೀಡುವ ಅಂತಿಮ ಆದೇಶಕ್ಕೆ ಒಳಪಡಲಿದೆ ಎಂದು ಸ್ಪಷ್ಟಪಡಿಸಿ, ವಿಚಾರಣೆ ಮುಂದೂಡಿತು.

ಇನ್ನು ಕಳೆದ ಜುಲೈನಲ್ಲಿ ಮೊದಲ ಬಾರಿಗೆ ಹೊರಡಿಸಿದ್ದ ಸುಗ್ರೀವಾಜ್ಞೆ ಪ್ರಶ್ನಿಸಿ ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದಶಿ ಕೆ.ಸಿ. ಗಂಗಾಧರಯ್ಯ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದವು. ಈ ಮಧ್ಯೆ, ತಿದ್ದುಪಡಿ ವಿಧೇಯಕ್ಕೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಬಾರಿ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮೊದಲಿನ ಅರ್ಜಿದಾರರು ಅರ್ಜಿಗಳನ್ನು ತಿದ್ದುಪಡಿ ಮಾಡಿ ಸಲ್ಲಿಸಲು ಅವಕಾಶ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಇಂದು ಪುರಸ್ಕರಿಸಿದ ಪೀಠ, ತಿದ್ದುಪಡಿ ಅರ್ಜಿ ಸಲ್ಲಿಸಲು ಎಲ್ಲ ಅರ್ಜಿದಾರರಿಗೂ ಅವಕಾಶ ನೀಡಿತು.

ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದಪಡಿಗೆ 2ನೇ ಬಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನೂ ಪ್ರಶ್ನಿಸಿ ಪಿಐಎಲ್

ಪ್ರಕರಣದ ಹಿನ್ನೆಲೆ : ರಾಜ್ಯ ಸರ್ಕಾರ ಕಳೆದ ಜುಲೈನಲ್ಲಿ ತನ್ನ ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ, ಬಿ, ಸಿ ಹಾಗೂ 80 ಕ್ಕೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿತ್ತು. ಈ ತಿದ್ದುಪಡಿಯಿಂದಾಗಿ ರೈತರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ಸೃಷ್ಟಿಯಾಗಿದೆ. ಈ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾದರೂ ಸರ್ಕಾರ ತನ್ನ ನಿಲುವು ಸಮರ್ಥಿಸಿಕೊಂಡಿತ್ತು.

ಆದರೆ, ವಿಧಾನ ಪರಿಷತ್‌ನಲ್ಲಿ ತಿದ್ದುಪಡಿ ವಿಧೇಯಕ್ಕೆ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ಎರಡನೇ ಬಾರಿ ಸುಗ್ರೀವಾಜ್ಞೆ ಹೊರಡಿಸಿದೆ. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಎರಡನೇ ಸುಗ್ರೀವಾಜ್ಞೆಯಲ್ಲೂ ಖಾಸಗಿ ಕಂಪನಿಗಳು, ಟ್ರಸ್ಟ್‌ಗಳು ಖರೀದಿಸುವ ಜಮೀನಿನ ಪ್ರಮಾಣಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಇದು ಪರೋಕ್ಷವಾಗಿ ಜಮೀನು ಕಬಳಿಕೆಯನ್ನು ಉತ್ತೇಜಿಸುತ್ತದೆ. ತಿದ್ದುಪಡಿ ನಿಯಮವು ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆ ತಂದಿದೆ ಎಂದು ಆಕ್ಷೇಪಿಸಿದ್ದಾರೆ.

ABOUT THE AUTHOR

...view details