ಕರ್ನಾಟಕ

karnataka

ETV Bharat / state

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನವೇ ಕಟೀಲ್​​ಗೆ ಹೈಕೋರ್ಟ್​ನಿಂದ ಬಿಗ್​​​​​ ರಿಲೀಫ್​​​​​ - ನಳಿನ್​ ಕುಮಾರ್​ ಕಟೀಲ್​

ರಾಜ್ಯ ಬಿಜೆಪಿ‌ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್‌ ಕಟೀಲ್ ಅವರು‌ ಎದುರಿಸುತ್ತಿದ್ದ ಪ್ರಚೋದನಾಕಾರಿ ಭಾಷಣ ಆರೋಪ ಪ್ರಕರಣದಿಂದ ಮುಕ್ತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.

ನಳಿನ್​ ಕುಮಾರ್

By

Published : Aug 27, 2019, 7:10 PM IST

ಬೆಂಗಳೂರು:ರಾಜ್ಯ ಬಿಜೆಪಿ‌ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್‌ ಕಟೀಲ್ ಎದುರಿಸುತ್ತಿದ್ದ ಪ್ರಚೋದನಾಕಾರಿ ಭಾಷಣದ ಆರೋಪ ಪ್ರಕರಣದಿಂದ ಮುಕ್ತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.

ನಳಿನ್ ಕುಮಾರ್ ಕಟೀಲ್‌ 2017ಜನವರಿ 1ರಂದು ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ ಅವರ ಕೊಲೆ ಪ್ರಕರಣ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಭಾಷಣ ಮಾಡುವಾಗ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿದ್ದರು. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಳಿನ್ ಕುಮಾರ್​ ಕಟೀಲ್​ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ರದ್ದತಿ ಕೋರಿ ನಳಿನ್​ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಜಕೀಯ ದುರುದ್ದೇಶದಿಂದ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮ್ಮ ವಿರುದ್ಧ ಎಫ್ಐಆರ್ ದಾಖಲಿಸುವಾಗ ನ್ಯಾಯಾಲಯದ ಅನುಮತಿ ಪಡೆಯಲಾಗಿಲ್ಲ ಎಂದು ನಳಿನ್ ಕುಮಾರ್ ಕಟೀಲ್​ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ್ರು.

ಕಟೀಲ್ ಪರ ವಕೀಲರ ವಾದವನ್ನ ಪರಿಗಣಿಸಿದ ನ್ಯಾಯಲಯ, ಪ್ರಚೋದನಕಾರಿ ಭಾಷಣದ ಆರೋಪದಿಂದ ಸಂಸದ ನಳೀನ್ ಕುಮಾರ್ ಕಟಿಲ್​ ಅವರನ್ನು ಮುಕ್ತಗೊಳಿಸಿದೆ ಹಾಗೂ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡಿ ಆದೇಶ ನೀಡಿದೆ.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಟೀಲ್​ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕೊಣಾಜೆ ಪೊಲೀಸರು ಎಫ್ಐಆರ್ ದಾಖಲಿಸಿ ಜೆಎಂಎಫ್​​ಸಿ ನ್ಯಾಯಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು.

ABOUT THE AUTHOR

...view details