ಬೆಂಗಳೂರು:ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 12 ವಾರ ಕಾಲಾವಕಾಶ ನೀಡಿದೆ.
ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿ, ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ವಿಗಂಡಣೆ ಮತ್ತು ಮೀಸಲು ನಿಗದಿ ಕೆಲಸವನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿ ಮೇ 24ರಂದು ಹೈಕೋರ್ಟ್ ಆದೇಶಿಸಿತ್ತು.