ಬೆಂಗಳೂರು: ಅಜೀಂ ಪ್ರೇಮ್‌ಜಿ ಟ್ರಸ್ಟ್ ಕಂಪೆನಿ ಪ್ರೈವೇಟ್ ಲಿಮಿಟೆಡ್‌ಗೆ ಹೆಚ್ಚುವರಿಯಾಗಿ 5,258.14 ಕೋಟಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಮುಂದಿನ ವಿಚಾರಣೆಯವರೆಗೆ ಐಟಿ ನೋಟಿಸ್ಗೆ ತಡೆ ನೀಡಿದೆ. ಅಲ್ಲದೇ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ತೆರಿಗೆ ಇಲಾಖೆಯ ಹೆಚ್ಚುವರಿ ನಿರ್ದೇಶಕರು ಮತ್ತು ಉಪ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜ.19ಕ್ಕೆ ಮುಂದೂಡಿತು.
ಅಜೀಂ ಪ್ರೇಮ್‌ಜಿ ಟ್ರಸ್ಟ್ ಕಂಪೆನಿಗೆ ಹೆಚ್ಚುವರಿ ತೆರಿಗೆ ಪಾವತಿ ಆದೇಶಕ್ಕೆ ಮಧ್ಯಂತರ ತಡೆ - etv bharat karnataka
ಅಜೀಂ ಪ್ರೇಮ್‌ಜಿ ಟ್ರಸ್ಟ್ ಕಂಪೆನಿ ಪ್ರೈವೇಟ್ ಲಿಮಿಟೆಡ್‌ಗೆ ಹೆಚ್ಚುವರಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಈ ಪ್ರಕರಣದಲ್ಲಿ ಮಂಗಳವಾರ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಅಜೀಂ ಪ್ರೇಮ್‌ಜಿ ಟ್ರಸ್ಟ್ ಕಂಪೆನಿ ಪ್ರೈವೇಟ್ ಲಿಮಿಟೆಡ್‌ಗೆ ಹೆಚ್ಚುವರಿ ತೆರಿಗೆ ಪಾವತಿಗೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಅಜೀಂ ಪ್ರೇಮ್‌ಜಿ ಟ್ರಸ್ಟ್ ಕಂಪೆನಿಯು 282.48 ಕೋಟಿ ರೂ ತೆರಿಗೆ ಪಾವತಿಸಿದೆ. ತೆರಿಗೆ ಇಲಾಖೆಯು 2021-22ನೇ ಸಾಲಿಗೆ ಹೆಚ್ಚುವರಿಯಾಗಿ 5,258.14 ಕೋಟಿ ರೂ ತೆರಿಗೆ ಬೇಡಿಕೆ ಇಟ್ಟು ನೋಟಿಸ್ ಜಾರಿ ಮಾಡಿದೆ. ಇದನ್ನು ವಜಾ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಇದನ್ನೂ ಓದಿ:ಚಾಲನಾ ಪರವಾನಿಗೆ ನಕಲಿ ಎಂದು ಸಾಬೀತುಪಡಿಸುವುದು ವಿಮಾ ಕಂಪೆನಿ ಜವಾಬ್ದಾರಿ: ಹೈಕೋರ್ಟ್