ಕರ್ನಾಟಕ

karnataka

ETV Bharat / state

ಪಿಎಸ್​ಐ ಹಗರಣದ ಪ್ರಮುಖ ಆರೋಪಿ ಪತಿ ರಾಜೇಶ್​ ಹಾಗರಿಗಿಗೆ​ ಜಾಮೀನು ನೀಡಿದ ಹೈಕೋರ್ಟ್​ - ಈಟಿವಿ ಭಾರತ ಕನ್ನಡ

ಪಿಎಸ್​ಐ ಪ್ರಕರಣದ ಎಂಟನೆ ಆರೋಪಿಯಾಗಿದ್ದ ರಾಜೇಶ್ ಹಾಗರಗಿಗೆ ಕರ್ನಾಟಕ ಹೈಕೋರ್ಟ್​ನ ಕಲಬುರಗಿ ವಿಭಾಗೀಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಯ ಮೇಲೆ ಗಂಭೀರವಾದ ಆರೋಪಗಳಿರುವ ಸಂಬಂಧ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಜಾಮೀನು ನೀಡಿದೆ.

High Court grants bail to Rajesh Hagarigi main accused in PSI scam
ಹೈಕೋರ್ಟ್​ನಿಂದ ಜಾಮೀನು ಮಂಜೂರು

By

Published : Sep 27, 2022, 6:02 PM IST

ಬೆಂಗಳೂರು: ಪೊಲೀಸ್​ ಸಬ್​ ಇನ್​ಸ್ಟೆಕ್ಟರ್​(ಪಿಎಸ್​ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ದಿವ್ಯಾ ಹಾಗರಗಿ ಅವರ ಪತಿ ಕಲಬುರ್ಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಅಧ್ಯಕ್ಷ ರಾಜೇಶ್ ಹಾಗರಗಿಗೆ ಅವರಿಗೆ ಕರ್ನಾಟಕ ಹೈಕೋರ್ಟ್​ನ ಕಲಬುರಗಿ ವಿಭಾಗೀಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ರಾಜೇಶ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ಅವರ ನೇತೃತ್ವದ ಏಕಸದಸ್ಯ ಪೀಠ, ಹಗರಣದ ಪ್ರಮುಖ ಆರೋಪಿಯ ಪತಿ ಎಂಬ ಕಾರಣಕ್ಕೆ ಜಾಮೀನು ನಿರಾಕರಿಸಲಾಗದು ಎಂದು ಅಭಿಪ್ರಾಯ ಪಟ್ಟು ಅರ್ಜಿಯನ್ನು ಪುರಸ್ಕರಿಸಿದೆ.

ಷರತ್ತು ಬದ್ಧ ಜಾಮೀನು:ಅಲ್ಲದೇ, ಅರ್ಜಿದಾರರ ವಿರುದ್ಧ ಯಾವುದೇ ಗಂಭೀರವಾದ ಆರೋಪಗಳಿರುವ ಸಂಬಂಧ ಸಾಕ್ಷ್ಯಾಧಾರಗಳು ಇಲ್ಲ. ಪ್ರಮುಖ ಆರೋಪಿಯ ಪತಿ ಎಂಬ ಕಾರಣ ನೀಡಿ ಅರ್ಜಿದಾರರು ಜಾಮೀನಿಗೆ ಅರ್ಹ ಅಲ್ಲ ಎಂದು ಹೇಳಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಸಾಕ್ಷ್ಯ ನಾಶಕ್ಕೆ ಮುಂದಾಗಬಾರದು. ಅನುಮತಿ ಇಲ್ಲದೇ ಠಾಣೆ ವ್ಯಾಪ್ತಿ ಬಿಟ್ಟು ಹೊರಕ್ಕೆ ಹೋಗಬಾರದು ಎಂದು ನ್ಯಾಯಪಪೀಠ ಆರೋಪಿಗೆ ಷರತ್ತುಗಳನ್ನು ವಿಧಿಸಿದೆ

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಪಿಎಸ್ಐ ಹಗರಣ ರಾಜ್ಯದಲ್ಲಿ ದೊಡ್ಡ ಆರ್ಥಿಕ ಅಪರಾಧವಾಗಿದೆ. ಅರ್ಜಿದಾರರು ಪತ್ನಿ ದಿವ್ಯಾ ಹಾಗರಗಿಗೆ ಆಶ್ರಯ ನೀಡುವ ಮೂಲಕ ಪ್ರಮಾದವೆಸಗಿದ್ದಾರೆ. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಅರ್ಜಿದಾರರ ಪರ ವಕೀಲರು, ಪಿಎಸ್​ಐ ಹಗರಣದ ಪ್ರಮುಖ ಆರೋಪಿಯಾಗಿರುವ ಮಲ್ಲಿಕಾರ್ಜುನ ಮೇಳಕುಂದಿ ಅವರಿಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರಾಜೇಶ್ ಅವರ ವಿರುದ್ಧವೂ ಇದೇ ಆರೋಪಗಳಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ :ಪ್ರಕರಣದ ಎಂಟನೆ ಆರೋಪಿಯಾಗಿದ್ದ ರಾಜೇಶ್ ಹಾಗರಗಿ ಅವರನ್ನು 2022ರ ಏಪ್ರಿಲ್ 7ರಂದು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದರು. ವಿಚಾರಣಾಧೀನ ನ್ಯಾಯಾಲಯವು ಅವರ ಜಾಮೀನು ಅರ್ಜಿ ವಜಾ ಮಾಡಿತ್ತು. ಅನಂತರ ಹೈಕೋರ್ಟ್ ಸಹ ಆರೋಪ ಪಟ್ಟಿ ಸಲ್ಲಿಕೆಯಾಗಿಲ್ಲ ಎಂದು ಅರ್ಜಿದಾರರ ಪಾತ್ರದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಜಾಮೀನು ನಿರಾಕರಿಸಿತ್ತು. ಇದೀಗ ಆರೋಪ ಪಟ್ಟಿ ಸಲ್ಲಿಸಿದ್ದು, ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ :ಶಿವಮೊಗ್ಗದಲ್ಲಿ PFI ಕಾರ್ಯಕರ್ತರು ವಶಕ್ಕೆ.. ಜಾಮೀನು ನೀಡದ್ದಕ್ಕೆ ವಕೀಲರ ಆಕ್ರೋಶ

ABOUT THE AUTHOR

...view details