ಕರ್ನಾಟಕ

karnataka

ETV Bharat / state

ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ - ಕರಗ ಮಹೋತ್ಸವದ ಬಗ್ಗೆ ಹೈಕೋರ್ಟ್ ಆದೇಶ

ಬೆಂಗಳೂರು ಕರಗ ಮಹೋತ್ಸವದಲ್ಲಿ ರಾತ್ರಿ ನಗರದಲ್ಲಿ ಮೆರವಣಿಗೆ ನಡೆಸಲು ಧರ್ಮರಾಯಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಹೈಕೋರ್ಟ್​ನಿಂದ ಸಮ್ಮತಿ ಸಿಕ್ಕಿದೆ.

high-court-green-signal-for-bengaluru-karaga-procession
ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

By

Published : Apr 14, 2022, 7:05 AM IST

ಬೆಂಗಳೂರು:ಏಪ್ರಿಲ್ 16ರಂದು ಬೆಂಗಳೂರು ನಗರದಲ್ಲಿ ಪ್ರತಿ ವರ್ಷದಂತೆ ನಡೆಯುವ ಕರಗ ಮಹೋತ್ಸವದಲ್ಲಿ ರಾತ್ರಿ ನಗರದಲ್ಲಿ ಮೆರವಣಿಗೆ ನಡೆಸಲು ಧರ್ಮರಾಯಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಹೈಕೋರ್ಟ್ ಸಮ್ಮತಿ ನೀಡಿದೆ. ಮೆರವಣಿಗೆಗೆ ಅನುಮತಿ ಕೋರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅರ್ಜಿ ಸಲ್ಲಿಸಿತ್ತು.

ನಗರದ ಫ್ರೀಡಂ ಪಾರ್ಕ್ ಹೊರತುಪಡಿಸಿ ನಗರದ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸಕೂಡದು ಎಂದು ಹೈಕೋರ್ಟ್ ಮಾರ್ಚ್ 3ರಂದು ಆದೇಶಿಸಿತ್ತು. ಹೀಗಾಗಿ ದೇವಾಲಯ ವ್ಯವಸ್ಥಾಪನಾ ಸಮಿತಿಯು ಮಹೋತ್ಸವದ ಮೆರವಣಿಗೆಗೆ ಅನುಮತಿ ಕೋರಿತ್ತು.

ಅರ್ಜಿ ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ, ನಗರದಲ್ಲಿ ಏಪ್ರಿಲ್ 16ರಂದು ಬೆಂಗಳೂರು ಕರಗ ಮೆರವಣಿಗೆ ನಡೆಸಲು ಧರ್ಮರಾಯಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅನುಮತಿ ನೀಡಿ ಆದೇಶಿಸಿತು. ಹಾಗೆಯೇ, ಸಂಚಾರಕ್ಕೆ ಯಾವುದೇ ರೀತಿ ಅಡಚಣೆ ಉಂಟಾಗದಂತೆ ನೋಡಿಕೊಳ್ಳುವಂತೆ ಷರತ್ತು ವಿಧಿಸಿದ ಪೀಠ, ಈ ಆದೇಶವು ಕರಗ ಮೆರವಣಿಗೆಗೆ ಮಾತ್ರ ಅನ್ವಯಿಸಲಿದೆ ಎಂದು ಸ್ಪಷ್ಟಪಡಿಸಿತು.

ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ನಗರದಲ್ಲಿ ಆಗಾಗ್ಗೆ ಮೆರವಣಿಗೆ, ಪ್ರತಿಭಟನೆ ನಡೆಸುವುದರಿಂದ ಜನರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಹಾಗೆಯೇ, ವಾಹನಗಳ ಸಂಚಾರಕ್ಕೂ ತೀವ್ರ ಸಮಸ್ಯೆಯಾಗುತ್ತಿತ್ತು. ಈ ಸಂಬಂಧ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಕಳೆದ ಮಾರ್ಚ್ 31ರಂದು ಇನ್ನು ಮುಂದೆ ಫ್ರೀಡಂ ಪಾರ್ಕ್ ಹೊರತುಪಡಿಸಿ ನಗರದ ಇತರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಯದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ:ಸಂತೋಷ್ ಪಾಟೀಲ್ ಮರಣೋತ್ತರ ಪರೀಕ್ಷೆ ಅಂತ್ಯ: ಬೆಳಗಾವಿಯತ್ತ ಮೃತದೇಹ

ABOUT THE AUTHOR

...view details