ಕರ್ನಾಟಕ

karnataka

ETV Bharat / state

ಡಾ. ವಿಷ್ಣುವರ್ಧನ್​ ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​​ - kannada news

ಸ್ಥಳ ವಿವಾದದಿಂದ ಸ್ಥಗಿತವಾಗಿದ್ದ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ.

ಸಾಹಸ ಸಿಂಹ ನಟ ದಿವಂಗತ ಡಾ.ವಿಷ್ಣುವರ್ಧನ್

By

Published : Apr 12, 2019, 9:46 PM IST

ಬೆಂಗಳೂರು: ಸಾಹಸ ಸಿಂಹ ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ವಿವಾದ ಕೊನೆಗೂ ಬಗೆಹರಿದಿದ್ದು, ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್ ಗ್ನೀನ್ ಸಿಗ್ನಲ್ ನೀಡಿದೆ.

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಕ್ಷೇಪಣೆ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದ್ರ ಅವರಿದ್ದ ನ್ಯಾಯಪೀಠ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡಿ ಆದೇಶಿಸಿದೆ.

ಮೈಸೂರು ತಾಲೂಕು ಉದ್ಬೂರು ಸಮೀಪ ವಿಷ್ಣುವರ್ಧನ್ ಸ್ಮಾರಕಕ್ಕೆ ಜಿಲ್ಲಾಡಳಿತ ಸ್ಥಳ ನಿಗದಿ ಮಾಡಿತ್ತು. ಜಿಲ್ಲಾಡಳಿತವು ಸ್ಮಾರಕಕ್ಕೆ ನೀಡಿದ್ದ ಭೂಮಿಗೆ ಸಂಬಂಧಪಟ್ಟಂತೆ ಸ್ಮಾರಕ ನಿರ್ಮಾಣ ರದ್ದು ಕೋರಿ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು ಮೈಸೂರಿನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾ ನ್ಯಾಯಾಲಯವು ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ವಿಷ್ಣುವರ್ಧನ್ ಸ್ಮಾರಕಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಸ್ಮಾರಕದ ಕೆಲಸವನ್ನು ನಿಧಾನಗತಿಯಲ್ಲಿ ಮುಂದುವರಿಸಿಕೊಂಡು ಬಂದಿತ್ತು. ಇದೇ ವೇಳೆ ಭಾರತಿ ವಿಷ್ಣುವರ್ಧನ್ ಅವರ ಒತ್ತಾಯಕ್ಕೆ ಮಣಿದು ಸರ್ಕಾರ ವಿಷ್ಣು ಸ್ಮಾರಕಕ್ಕೆ ಮೈಸೂರಿನ ಹೆಚ್.ಡಿ.ಕೋಟೆ ರಸ್ತೆಯಲ್ಲಿರುವ ಹಾಲಾಳುವಿನ ಉದ್ಬೂರು ಕ್ರಾಸ್ ಬಳಿ ಜಮೀನು ನೀಡಿತ್ತು.

2016ರ ಡಿ. 6ರಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷ್ಣುವರ್ಧನ್ ಸ್ಮಾರಕ ಶಂಕುಸ್ಥಾಪನೆ ಮಾಡುವುದಕ್ಕೆ ಮುಂದಾಗಿದ್ದರು. ಬಳಿಕ ವಿಷ್ಣುವರ್ಧನ್ ಕುಟುಂಬಸ್ಥರು ಆ ಜಾಗದಲ್ಲಿ ಭೂಮಿ ಪೂಜೆ ನಡೆಸಿದ್ದರು. ಆದರೆ ಸ್ಥಳಕ್ಕೆ ಸಂಬಂಧಪಟ್ಟಂತೆ ಮಹದೇವಮ್ಮ ಹಾಗೂ ಕೆಲ ಗ್ರಾಮಸ್ಥರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೀಗಾಗಿ, ವಿಷ್ಣುವರ್ಧನ್ ಸ್ಮಾರಕದ ಕೆಲಸ ಅಲ್ಲಿಗೇ ನಿಂತು ಹೋಗಿತ್ತು.

ABOUT THE AUTHOR

...view details