ಕರ್ನಾಟಕ

karnataka

ETV Bharat / state

ರಾಜ್ಯ ಕಾನೂನು ವಿವಿ ಪರೀಕ್ಷೆಗಳಿಗೆ ಸಮ್ಮತಿ ನೀಡಿದ ಹೈಕೋರ್ಟ್ - ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ

ವಿಶ್ವವಿದ್ಯಾಲಯದ ಧನ ಸಹಾಯ ಆಯೋಗ (ಯುಜಿಸಿ) ನಿರ್ದೇಶನದ ಪ್ರಕಾರ ಕೋವಿಡ್ ಸಂದರ್ಭದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳನ್ನು ಪಾಸ್​ ಮಾಡಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ನಿರ್ದೇಶಿಸಿತ್ತು..

High Court
ಹೈಕೋರ್ಟ್

By

Published : Nov 24, 2021, 6:43 PM IST

ಬೆಂಗಳೂರು :ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ನಡೆಸಲು ಇದ್ದ ತಡೆಯನ್ನ ಹೈಕೋರ್ಟ್ ವಿಭಾಗೀಯ ಪೀಠ ತೆರವುಗೊಳಿಸಿದೆ. ಪರೀಕ್ಷೆ ನಡೆಸಲು ವಿವಿಗೆ ಅನುಮತಿಯನ್ನ ಹೈಕೋರ್ಟ್‌ ನೀಡಿದೆ.

ನ.15ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಪರೀಕ್ಷೆಗಳನ್ನು ನಡೆಸಲು ವಿವಿಗೆ ಸಮ್ಮತಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಇದರ ಜೊತೆಗೆ ನ್ಯಾಯಾಲಯದ ಅನುಮತಿ ಇಲ್ಲದೆ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ :ವಿಶ್ವವಿದ್ಯಾಲಯದ ಧನ ಸಹಾಯ ಆಯೋಗ (ಯುಜಿಸಿ) ನಿರ್ದೇಶನದ ಪ್ರಕಾರ ಕೋವಿಡ್ ಸಂದರ್ಭದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳನ್ನು ಪಾಸ್​ ಮಾಡಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ನಿರ್ದೇಶಿಸಿತ್ತು.

ಆದಾಗ್ಯೂ, ವಿವಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿ ವಿದ್ಯಾರ್ಥಿ ನವೀನ್ ಎಂಬುವರು ಹಾಗೂ ಇತರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠ, ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿತ್ತು.

ಇದನ್ನೂ ಓದಿ: Tomato price: ಹುಬ್ಬಳ್ಳಿಯಲ್ಲೂ ದಾಖಲೆ ಏರಿಕೆ ಕಂಡ ಟೊಮೆಟೊ.. ಗ್ರಾಹಕರು ಕಂಗಾಲು

ABOUT THE AUTHOR

...view details