ಬೆಂಗಳೂರು:ರಾಜ್ಯದ ಅಂಧ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಟಾಕಿಂಗ್ ಲ್ಯಾಪ್ ಟಾಪ್ ವಿತರಿಸಲು ಸರ್ಕಾರ ರೂಪಿಸಿರುವ ನೀತಿ ನಿಮಯಗಳು ಯಾವವು ಹಾಗೂ ಎರಡು ವರ್ಷಗಳಿಂದ ಲ್ಯಾಪ್ ಟಾಪ್ಗಳನ್ನೇಕೆ ವಿತರಿಸಿಲ್ಲ ಎಂಬುದರ ಕುರಿತು ಜನವರಿ 8ರೊಳಗೆ ಸಮಗ್ರ ಮಾಹಿತಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಅಂಧ ವಿದ್ಯಾರ್ಥಿಗಳಿಗೆ ಕಳೆದ 2 ವರ್ಷಗಳಿಂದ ಉಚಿತ ಟಾಕಿಂಗ್ ಲ್ಯಾಪ್ಟಾಪ್ ವಿತರಿಸಿಲ್ಲ ಎಂದು ಆರೋಪಿಸಿ ನಗರದ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು ವಾದಿಸಿ, ಸರ್ಕಾರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿಲ್ಲ. ಉಚಿತ ಲ್ಯಾಪ್ ಟಾಪ್ ಹಂಚುವ ಕುರಿತು ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನೂ ತಿಳಿಸಿಲ್ಲ ಎಂದರು.