ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಪೇಟೆ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದ್ದು, ಯಾವುದೇ ಆದೇಶ ಹೊರಡಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಮಂಗಳೂರಿನ ತೆಂಕಳೈಪಡಿ ಗ್ರಾಮದ ಧನಂಜಯ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ, ಮಳಲಿಪೇಟೆ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ಮಾದರಿ ರಚನೆ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಲು ನ್ಯಾಯಾಲಯದ ವತಿಯಿಂದ ಕಮಿಷನರ್ ಒಬ್ಬರನ್ನು ನೇಮಕ ಮಾಡಬೇಕು. ಪರಿಶೀಲನೆ ನಡೆಸುವವರೆಗೆ ದಾವೆಯ ಸಿಂಧುತ್ವದ ಕುರಿತು ಯಾವುದೇ ಆದೇಶ ನೀಡದಂತೆ ಸಿವಿಲ್ ಕೋರ್ಟ್‌ಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.