ಕರ್ನಾಟಕ

karnataka

ಕ್ರಷರ್ ಕಾಯ್ದೆ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆ: ಪಿಐಎಲ್ ವಿಚಾರಣೆ ಮುಂದೂಡಿದ ಹೈಕೋರ್ಟ್

By

Published : Sep 24, 2020, 9:50 PM IST

ಇಂದು ಚಿಕ್ಕಬಳ್ಳಾಪುರದ ಮೂಲದ ವ್ಯಕ್ತಿ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Highcourt
Highcourt

ಬೆಂಗಳೂರು :ಜಲ್ಲಿ ಕ್ರಷರ್ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿರುವ ವಿಚಾರ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಸರ್ಕಾರದ ಪರ ವಕೀಲರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಸಂಬಂಧ ದಾಖಲಾಗಿರುವ ಪಿಐಎಲ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಈ ಕುರಿತು ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿಯ ಆಂಜನೇಯರೆಡ್ಡಿ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕಾಯ್ದೆಗೆ ತಿದ್ದುಪಡಿ ತಂದಿರುವ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ ಎಂದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಸುಗ್ರೀವಾಜ್ಢೆ ಸಂಬಂಧ ಅಧಿವೇಶನದಲ್ಲಿ ಯಾವ ನಿಲುವು ಕೈಗೊಳ್ಳಲಾಗುತ್ತದೆ ಎಂಬುದನ್ನು ತಿಳಿದು, ನಂತರ ವಿಚಾರಣೆ ಮುಂದುವರೆಸುವುದು ಸೂಕ್ತವೆಂದು ಅಭಿಪ್ರಾಯಪಟ್ಟು ವಿಚಾರಣೆ ಮುಂದೂಡಿತು.

ABOUT THE AUTHOR

...view details