ಬೆಂಗಳೂರು:ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ವೈದ್ಯಕೀಯ ವರದಿ ಆಧರಿಸಿ ತೀರ್ಮಾನಿಸುವುದಾಗಿ ಹೇಳಿರುವ ಹೈಕೋರ್ಟ್, ನಟಿಗೆ ವಾಣಿವಿಲಾಸ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ನಿರ್ದೇಶಿಸಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ನಟಿ ಸಂಜನಾ ಗಲ್ರಾನಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಏಕಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ನಟಿ ಆರೋಗ್ಯಕ್ಕೆ ಸಂಬಂಧಿಸಿದಂತೆ ನಗರದ ವಾಣಿ ವಿಲಾಸ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ವರದಿ ಪರಿಶೀಲಿಸಿದ ಬಳಿಕ ಜಾಮೀನು ನೀಡುವ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನ ಡಿ. 10ಕ್ಕೆ ಮುಂದೂಡಿದೆ.